ದ ಕ ಜಿಲ್ಲಾ ಕೇಂದ್ರ ಸಹಕಾರಿ ಯೂನಿಯನ್ ಮಂಗಳೂರು ಆಶ್ರಯದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ ಅವರ 146ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಸ್‌ಸಿಡಿಟಿಸಿ ಬ್ಯಾಂಕಿನಲ್ಲಿ ಆಗಸ್ಟ್ 4 ರಂದು ನಡೆಯಿತು. ಅಧ್ಯಕ್ಷ ರಾಜೇಂದ್ರ ಕುಮಾರ್ ಹಾಗೂ ನಿರ್ದೇಶಕರುಗಳು ಶಿವರಾವ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಿದರು.

ಸಹಕಾರ ರತ್ನ ಡಾ ಎಂ ಎನ್ ರಾಜೇಂದ್ರ ಕುಮಾರ್ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಬ್ಯಾಂಕಿನ ಉನ್ನತಿಗೆ ಸಹಕರಿಸುತ್ತಿರುವ ಎಲ್ಲರ ಶ್ರಮವನ್ನು ಸ್ಮರಿಸಿಕೊಂಡು ಕೃತಜ್ಞತೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಲೇಖಕ ಅರವಿಂದ ಚೊಕ್ಕಾಡಿ ಅವರ ಮೊಳಹಳ್ಳಿ ಶಿವರಾವ್ ಆಕರ ಗ್ರಂಥವನ್ನು ಮತ್ತು ಕರಾವಳಿ ಸಹಕಾರಿ ಮಾಸಪತ್ರಿಕೆಯನ್ನು ಬಿಡುಗಡೆ ಮಾಡಿದರು.

ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮವನ್ನು ನಿರೂಪಿಸಿದರು. ಚಿತ್ರಲೇಖಾ ಪ್ರಾರ್ಥಿಸಿದರು. ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಸ್ವಾಗತಿಸಿದ್ದರು. ಸಿಬ್ಬಂದಿ ರಾಜೀವ್ ಕಾರ್ಯಕ್ರಮ ನಿರ್ವಹಿಸಿದರು. ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ವಿ ಹಿರೇಮಠ್ ವಂದಿಸಿದರು.
ವರದಿ ರಾಯಿ ರಾಜ ಕುಮಾರ್

