ಬಿರುವೆರ್ ಕುಡ್ಲ ಮುಲ್ಕಿ ಘಟಕದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

0
111

ಮುಲ್ಕಿ: ಬಿರುವೆರ್ ಕುಡ್ಲ (ರಿ.) ಮುಲ್ಕಿ ಘಟಕದ ಸಭೆ ಜು. 6ರಂದು ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ನೂತನ ಅಧ್ಯಕ್ಷರಾಗಿ ಉಮೇಶ್ ಮಾನಂಪಾಡಿ ಆಯ್ಕೆಯಾದರು, ಗೌರವಾಧ್ಯಕ್ಷರಾಗಿ ಕಿಶೋರ್ ಜೆ ಸಾಲ್ಯಾನ್, ಉಪಾಧ್ಯಕ್ಷರಾಗಿ ಕಿರಣ್ ಬರ್ಕೆ ,ಮಾಧವ ಕಿಲ್ಪಾಡಿ , ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕಿಲ್ಪಾಡಿ, ಜೊತೆ ಕಾರ್ಯದರ್ಶಿಯಾಗಿ ರಕ್ಷಿತ್ ಪೂಜಾರಿ, ಕೋಶಾಧಿಕಾರಿಯಾಗಿ ಕಿಶೋರ್ ಅಂಚನ್ ಪಡುಬೈಲು, ಸಹ ಕೋಶಾಧಿಕಾರಿಯಾಗಿ ಅಶ್ವಿನ್ ಆದರ್ಶ್, ಸಂಘಟನೆ ಕಾರ್ಯದರ್ಶಿಗಳಾಗಿ ಸತೀಶ್ ಅಂಗಾರಗುಡ್ಡೆ, ದಿವಾಕರ ಧರ್ಮಸ್ಥಾನ, ಚರಣ್ ಕೊಳಚಿ ಕಂಬಳ,ದೀಪಕ್ ಪಡು ಬೈಲು, ತಾರನಾಥ ಕೊಕ್ಕರ್ ಕಲ್ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲಕಾಡಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಧರ್ಮದರ್ಶಿ ಡಾ ಹರಿಕೃಷ್ಣ ಪುನರೂರು, ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ವಾಮನ್ ಕೋಟ್ಯಾನ್, ಮಾಜೀ ಅಧ್ಯಕ್ಷ ಡಾ. ಹರಿಶ್ಚಂದ್ರ ಪಿ ಸಾಲ್ಯಾನ್, ಗೋಪಿನಾಥ ಪಡಂಗ, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್, ಮಾಜೀ ಅಧ್ಯಕ್ಷ ಸುನಿಲ್ ಆಳ್ವ, ಸದಸ್ಯ ಪುತ್ತು ಬಾವ, ಯೋಗೀಶ್ ಕೋಟ್ಯಾನ್, ಹರ್ಷರಾಜ ಶೆಟ್ಟಿ, ಮಂಜುನಾಥ ಕಂಬಾರ, ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ನ ಗೌರವಾಧ್ಯಕ್ಷ ವೆಂಕಟೇಶ ಹೆಬ್ಬಾರ್, ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್,ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್,ಉದಯಕುಮಾರ್ ಶೆಟ್ಟಿ ಅಧಿಧನ್, ನವೀನ್ ರಾಜ್,ವಿಠಲ್ ಎನ್ ಎಂ,ಶರತ್ ಕಾರ್ನಾಡ್ ,ಧರ್ಮಾನಂದ ಶೆಟ್ಟಿಗಾರ್, ಶಂಕರ್ ಪಡಂಗ,ಪ್ರಾಣೇಶ್ ಹೆಜ್ಮಾಡಿ ಮತ್ತಿತರರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here