ಬಿಜೆಪಿ ಜಿಲ್ಲಾ ಎಸ್.ಟಿ. ಮೋರ್ಚಾ ಪದಾಧಿಕಾರಿಗಳ ಪದಗ್ರಹಣ

0
45

ಎಲ್ಲ ವರ್ಗಗಳನ್ನು ತಲುಪಿದ ಬಿಜೆಪಿ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ : ಕುತ್ಯಾರು ನವೀನ್ ಶೆಟ್ಟಿ

ಉಡುಪಿ : ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವೆನಿಸಿದ ಬಿಜೆಪಿ ದೇಶದ ಎಲ್ಲಾ ವರ್ಗಗಳ ಜನತೆಯನ್ನು ತಲುಪುವ ಮೂಲಕ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ಯಾಗಿ ಜನಸೇವೆಗೈಯುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಎಸ್.ಟಿ. ಮೋರ್ಚಾದ ಪದಾಧಿಕಾರಿಗಳು ಮತ್ತು ಸದಸ್ಯರು ತಮ್ಮ ಜವಾಬ್ದಾರಿಗಳನ್ನು ಅರಿತು ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಜೊತೆಗೆ ಸದೃಢ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಭುಜಂಗ ನಾಯ್ಕ್ ಅಧ್ಯಕ್ಷತೆಯಲ್ಲಿ ನೂತನ ತಂಡದ ಪದಗ್ರಹಣವನ್ನು ನೆರವೇರಿಸಿ, ಜಿಲ್ಲಾ ಎಸ್.ಟಿ. ಮೋರ್ಚಾದ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರವನ್ನು ವಿತರಿಸಿ ಮಾತನಾಡಿದರು.

ಬಿಜೆಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಪದಾಧಿಕಾರಿಗಳ ಜವಾಬ್ದಾರಿ ಹಾಗೂ ಸಂಘಟನಾತ್ಮಕ ವಿಚಾರಗಳ ಕುರಿತು ವಿಸ್ತ್ರತ ಮಾಹಿತಿ ನೀಡಿದರು.

ಸಭಾಧ್ಯಕ್ಷತೆ ವಹಿಸಿದ ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಭುಜಂಗ ನಾಯ್ಕ್ ಮಾತನಾಡಿ ಮೋರ್ಚಾದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ ಜಿಲ್ಲಾಧ್ಯಕ್ಷರಿಗೆ ವಂದನೆ ತಿಳಿಸಿದರು. ನೂತನ ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಸದಸ್ಯರಿಗೆ ಅಭಿನಂದನೆಗಳನ್ನು ಸಲ್ಲಿಸಿ, ಎಸ್.ಟಿ. ಮೋರ್ಚಾದ ಮುಂದಿನ ಎಲ್ಲಾ ಕಾರ್ಯ ಚಟುವಟಿಕೆಗಳಿಗೆ ಎಲ್ಲರ ಸಹಕಾರ ಕೋರಿದರು.

ಜಿಲ್ಲಾ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ನಾಯ್ಕ್ ನೂಜಿನ ಬೈಲ್ ಸಹಿತ ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಉಮೇಶ್ ಎ.ನಾಯ್ಕ್ ಚೇರ್ಕಾಡಿ ಸ್ವಾಗತಿಸಿದರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿ, ಜಿಲ್ಲಾ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಭಾಷ್ ನಾಯ್ಕ್ ಪೆರ್ಡೂರು ವಂದಿಸಿದರು.

LEAVE A REPLY

Please enter your comment!
Please enter your name here