ದಾವಣಗೆರೆ: ಲೋಕಸಭಾ ಚುನಾವಣೆಯ ಬಳಿಕ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮುಂದುವರಿಯಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಿಜೆಪಿ ಜೆಡಿಎಸ್ ಒಂದಾಗಿ ನಡೆಯಬೇಕು. ಈ ಹೊಂದಾಣಿಕೆ ಈ ಚುನಾವಣೆಗೆ ಮಾತ್ರ ಸೀಮಿತವಲ್ಲ. ಮೈತ್ರಿ ಮುಂದುವರಿಯಬೇಕು ಎನ್ನುವುದು ಪ್ರಧಾನಿಯವರ ಆಶಯ. ಮುಂದಿನ ವಿಧಾನಸಭಾ ಚುನಾವಣೆ ವರೆಗೂ ಮೈತ್ರಿ ಮುಂದುವರಿಯಬೇಕು ಎಂಬುದು ಜನರ ಆಶಯವಾಗಿದೆ ಎಂದು ಅವರು ಹೇಳಿದ್ದಾರೆ. ದಾವಣಗೆರೆಯಲ್ಲಿ ಪಕ್ಷದ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಭಾರೀ ಅಂತರದ ಗೆಲುವು ಸಾಧಿಸಲಿದ್ದಾರೆ. ರಾಜ್ಯದ 28 ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲು ಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು.