ವಿಟ್ಲ : ರಸ್ತೆ ವಿಚಾರವಾಗಿ ನಡೆದ ಜಗಳದ ವೇಳೆ ಮಹಿಳೆಗೆ ಗುಪ್ತಾಂಗ ತೋರಿಸಿ ಇದ್ದಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿಕೃತಿ ಮೆರೆದಿದ್ದ. ಈ ವಿಚಾರ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಸದ್ಯ ಅಸಭ್ಯ ವರ್ತನೆ ತೋರಿದ ಪದ್ಮನಾಭ ಸಫಲ್ಯ ವಿರುದ್ಧ ಬಿಜೆಪಿ ಕ್ರಮ ಕೈಗೊಂಡಿದೆ.
ಬಿಜೆಪಿ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಿ ಪಕ್ಷದಿಂದ ಉಚ್ಚಾಟಿಸಿರುವ ಬಗ್ಗೆ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ತಿಳಿಸಿದೆ. ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಪದ್ಮನಾಭಸಪಲ್ಯನನ್ನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸಿ, ಪಕ್ಷದಿಂದ ಉಚ್ಚಾಟಿಸಲಾಗಿದೆ. ಅಲ್ಲದೆ ಪಂಚಾಯತ್ ಉಪಾಧ್ಯಕ್ಷ ಸ್ನಾನಕ್ಕೂ ರಾಜೀನಾಮೆ ನೀಡುವಂತೆ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಸೂಚಿಸಿದ್ದಾರೆ.
ಮಹಿಳೆಯರಿಗೆ ಗೌರವ ಮತ್ತು ಪ್ರಾತಿನಿಧ್ಯ ಕೊಡುವ ಪಾರ್ಟಿಯಲ್ಲಿ ವ್ಯತಿರಿಕ್ತವಾಗಿ ನಡೆದುಕೊಂಡು ಪಕ್ಷದ ಘನತೆ, ಗೌರವ ಹಾಗೂ ವರ್ಚಸ್ಸಿಗೆ ಘಾಸಿಯುಂಟು ಮಾಡಿರುವ ಕಾರಣಕ್ಕಾಗಿ ಈ ಕ್ರಮ ಜರುಗಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪದ್ಮನಾಭ ಸಫಲ್ಯ ಹಾಗೂ ಮನೆ ಸಮೀಪದ ಮಹಿಳೆಗೂ ರಸ್ತೆ ವಿಚಾರದಲ್ಲಿ ವಿವಾದ ಇತ್ತು. ಮಹಿಳೆ ಮನೆಗೆ ತೆರಳುತ್ತಿದ್ದ ವೇಳೆ ಇದ್ದಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಫಲ್ಯ ಮನೆ ದಾರಿಗೆ ಗೇಟು ಅಳವಡಿಸಿದ್ಧ. ಇದನ್ನು ಪ್ರಶ್ನಿಸಿದ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದ. ಈ ಸಂಬಂಧ ಮಹಿಳೆ ಪದ್ಮನಾಭ ಸಫಲ್ಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರು ದಾಖಲಾಗುತ್ತಿದ್ದಂತೆಯೇ ಪದ್ಮನಾಭ ಸಫಲ್ಯರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಿ ಪಕ್ಷದಿಂದ ಉಚ್ಚಾಟಿಸಲಾಗಿದೆ. ಪದ್ಮನಾಭ ಸಫಲ್ಯನ ಅಸಭ್ಯ ವರ್ತನೆಯ ವೀಡಿಯೋ ವೈರಲ್ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ.