ಬೆಂಗಳೂರು: ಸಂಸದ ಸ್ಥಾನ ಹಾಗೂ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಂಸದ ಸಂಗಣ್ಣ ಕರಡಿ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದರಿಂದ ಆಕ್ರೋಶಿತರಾಗಿದ್ದ ಸಂಗಣ್ಣ ತಮ್ಮ ಸಂಸದ ಸ್ಥಾನ ಮತ್ತು ಬಿಜೆಪಿ ಸದಸ್ಯತ್ವಕ್ಕೆ ನಿನ್ನೆಯಷ್ಟೇ ರಾಜೀನಾಮೆ ನೀಡಿದ್ದರು.
ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಕಾಂಗ್ರೆಸ್ ಸೇರಿದರು. ಅವರ ಜೊತೆಗೆ ದಾಸರಹಳ್ಳಿ ಕೃಷ್ಣಮೂರ್ತಿ, ನಿವೃತ್ತ ಐಎಎಸ್ ಅಧಿಕಾರಿ ಪುಟ್ಟಸ್ವಾಮಿ ಸೇರಿ ಹಲವರು ಕಾಂಗ್ರೆಸ್ ಸೇರಿದರು.