ಆ.25ರಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ, ರಾಜ್ಯಸಭಾ ಸದಸ್ಯ ಪ್ರೊ! ಎಮ್.ನಾಗರಾಜ್ ಉಡುಪಿ ಜಿಲ್ಲಾ ಭೇಟಿ

0
9

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ, ರಾಜ್ಯಸಭಾ ಸದಸ್ಯ ಪ್ರೊ! ಎಮ್.ನಾಗರಾಜ್ ಅವರು ಆ.25ರಂದು ಉಡುಪಿಗೆ ಆಗಮಿಸಿ ಬೆಳಿಗ್ಗೆ ಗಂಟೆ 10.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯ ನೂತನ ಕಟ್ಟಡ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

ಬೆಳಿಗ್ಗೆ ಗಂಟೆ 11.00ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯುವ ಜಿಲ್ಲಾ ಕಾರ್ಯ ತಂಡದ ಸಭೆಯಲ್ಲಿ ಪಕ್ಷದ ವತಿಯಿಂದ ಅವರನ್ನು ಗೌರವಿಸಲಾಗುವುದು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.