ಕೃಷ್ಣ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಪ್ರೊ. ನಾಗರಾಜ್ ಭೇಟಿ

0
5

ಉಡುಪಿ: ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠದ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಪ್ರೊ. ನಾಗರಾಜ್ ಅವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ದರ್ಶನ ಪಡೆದು ಆಶೀರ್ವಾದ ಸ್ವೀಕರಿಸಿದ ಅವರು, ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.

ಶ್ರೀ ಕೃಷ್ಣ ಮಠದ ಧಾರ್ಮಿಕ ವಾತಾವರಣದಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಪರ್ಯಾಯ ವ್ಯವಸ್ಥೆ ಹಾಗೂ ಮಠದ ಧಾರ್ಮಿಕ ಚಟುವಟಿಕೆಗಳ ಕುರಿತು ಗಣ್ಯರು ಪರಸ್ಪರ ವಿಚಾರ ವಿನಿಮಯ ಮಾಡಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ವಕ್ತಾರ ಮಧುಕರ ಮುದ್ರಾಡಿ, ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಹಾಗೂ ಜಿಲ್ಲಾ ಖಜಾಂಚಿ ಪ್ರವೀಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.