Saturday, December 14, 2024
Homeಬೆಂಗಳೂರುಸ್ಫೋಟಕ್ಕೆ ಉಗ್ರರ ಸಂಚು | ಮಲ್ಲೇಶ್ವರಂ ಬಿಜೆಪಿ ಕಚೇರಿಗೆ ಪೊಲೀಸ್‌ ಬಿಗಿ ಭದ್ರತೆ

ಸ್ಫೋಟಕ್ಕೆ ಉಗ್ರರ ಸಂಚು | ಮಲ್ಲೇಶ್ವರಂ ಬಿಜೆಪಿ ಕಚೇರಿಗೆ ಪೊಲೀಸ್‌ ಬಿಗಿ ಭದ್ರತೆ

ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಸುರಕ್ಷತೆ ದೃಷ್ಟಿಯಿಂದ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮಲ್ಲೇಶ್ವರಂ ಬಿಜೆಪಿ ಕಚೇರಿ ಸ್ಫೋಟಕ್ಕೆ ಉಗ್ರರು ಸಂಚು ರೂಪಿಸಿದ ವಿಚಾರ ರಾಷ್ಟ್ರೀಯ ತನಿಖಾ ದಳ (NIA) ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾದ ಬೆನ್ನಲ್ಲೇ, ಬಿಜೆಪಿ ಕಚೇರಿ ಎದುರು ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ.
ಬಿಜೆಪಿ ಕಚೇರಿಗೆ ಭೇಟಿಗೆ ಬರುವವರು ಮೆಟಲ್ ಡಿಟೆಕ್ಟರ್ ಮೂಲಕವೇ ಒಳ ಪ್ರವೇಶ ಕಡ್ಡಾಯಗೊಳಿಸಲಾಗಿದೆ. ಇದರ ಜೊತೆಗೆ ಪ್ರವೇಶ ದ್ವಾರದ ಎದುರು ಹೆಚ್ಚುವರಿ ಪೊಲೀಸರನ್ನು ನಿಯೋಜಿಲಾಗಿದೆ.
ನಿತ್ಯ ಬಿಜೆಪಿ ಕಚೇರಿಗೆ ಮಲ್ಲೇಶ್ವರಂ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌, ಸಬ್ ಇನ್ಸ್‌ಪೆಕ್ಟರ್‌ ಭೇಟಿ ಮಾಡಿ ಭದ್ರತೆ ಪರಿಶೀಲನೆ ಮಾಡಲಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣಪ್ರತಿಷ್ಠಾಪನೆ ದಿನವೇ ಬಿಜೆಪಿ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸುವ ಸಂಚನ್ನು ಐಸಿಸ್‌ ಶಂಕಿತ ಉಗ್ರರು ರೂಪಿಸಿದ್ದರು ಎಂಬ ಶಾಕಿಂಗ್‌ ವಿಚಾರ ಎನ್‌ಐಎ ತನಿಖೆಯಲ್ಲಿ ಬಯಲಾಗಿತ್ತು.
ಬ್ರೂಕ್‌ಫೀಲ್ಡ್‌ನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿಗಳಾದ ಮುಸ್ಸಾವಿರ್‌ ಹುಸೇನ್‌ ಶಾಜಿದ್‌, ಅಬ್ದುಲ್‌ ಮತೀನ್‌ ತಾಹ, ಮಾಜ್‌ ಮುನೀರ್‌ ಅಹಮದ್‌, ಮುಜಾಮಿಲ್‌ ಷರೀಫ್‌ ವಿರುದ್ಧ ಎನ್‌ಐಎ ಅಧಿಕಾರಿಗಳು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಸೋಮವಾರ ಆರೋಪಪಟ್ಟಿ ಸಲ್ಲಿಸಿದ್ದಾರೆ.

RELATED ARTICLES
- Advertisment -
Google search engine

Most Popular