Wednesday, October 9, 2024
Homeರಾಜ್ಯಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಮಾರಾಮಾರಿ: ಹಿಂದೂ ವಿದ್ಯಾರ್ಥಿಗಳ ವಿರುದ್ಧದ ಎಫ್ ಐ ಆರ್ ರದ್ದುಗೊಳಿಸಲು...

ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಮಾರಾಮಾರಿ: ಹಿಂದೂ ವಿದ್ಯಾರ್ಥಿಗಳ ವಿರುದ್ಧದ ಎಫ್ ಐ ಆರ್ ರದ್ದುಗೊಳಿಸಲು ಆಗ್ರಹಿಸಿ ಪ್ರತಿಭಟನೆ

ಬೀದರ್: ಇಲ್ಲಿನ ಕಾಲೇಜೊಂದರಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಹಿಂದೂ ವಿದ್ಯಾರ್ಥಿಗಳ ಮೇಲೆ ದಾಖಲಾಗಿರುವ ಎಫ್ ಐಆರ್ ರದ್ದುಗೊಳಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಪ್ರವಾಸಿ ಮಂದಿರದ ಬಳಿ ಸೇರಿದ ಕಾರ್ಯಕರ್ತರು ಅಂಬೇಡ್ಕರ್ ಸರ್ಕಲ್ ನಿಂದ ಡಿಸಿ ಕಚೇರಿಯವರೆಗೆ ಮೆರವಣಿಗೆ ನಡೆಸಿದರು. ರ್‍ಯಾಲಿಯಲ್ಲಿ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ವಿರುದ್ಧ ಧಿಕ್ಕಾರ ಕೂಗಲಾಯಿತು.

ಡಿಸಿ ಕಚೇರಿ ಬಳಿ ಪೊಲೀಸರು ಪ್ರತಿಭಟನಕಾರರನ್ನು ತಡೆದುದರಿಂದ ಈ ವೇಳೆ ವಾಗ್ವಾದ ನಡೆಯಿತು. ಹಿಂದೂ ವಿದ್ಯಾರ್ಥಿಗಳ ಮೇಲಿನ ಎಫ್ ಐಆರ್ ರದ್ದುಗೊಳಿಸದಿದ್ದಲ್ಲಿ ಜಿಲ್ಲೆಯಲ್ಲಿ ನಾವು ಶ್ರೀರಾಮನ ಅಭಿಯಾನ ನಡೆಸುತ್ತೇವೆ ಎಂದು ಪ್ರತಿಭಟನಕಾರರು ಎಚ್ಚರಿಸಿದರು. ಬಳಿಕ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿಗೆ ಮನವಿ ಸಲ್ಲಿಸಿದರು.

ಶಾಸಕ ಶರಣು ಸಲಗರ್, ಎಂಎಲ್ ಸಿ ರಘುನಾಥ ಮಲ್ಕಾಪೂರೆ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ಸೇರಿ ಸಂಘಟನೆಗಳ ಪ್ರಮುಖರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

RELATED ARTICLES
- Advertisment -
Google search engine

Most Popular