ವರದಿ :-ತುಳುನಾಡು ವಾರ್ತೆ
ಬೆಂಗಳೂರು : ಬಿಜೆಪಿ ರಾಜ್ಯ ಘಟಕದ ವತಿಯಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಜಿಲ್ಲಾವಾರು ವಿಶೇಷ ಸಭೆಯು ರಾಜಧಾನಿಯ ರಾಜ್ಯ ಬಿಜೆಪಿ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಯಶಸ್ವಿಯಾಗಿ ಜರುಗಿತು.
ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಮೂಲ್ಕಿ-ಮೂಡುಬಿದಿರೆ ಕ್ಷೇತ್ರದ ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರು ಸಕ್ರಿಯವಾಗಿ ಭಾಗವಹಿಸಿ, ಕ್ಷೇತ್ರದ ಅಭಿವೃದ್ಧಿ ಹಾಗೂ ಪಕ್ಷದ ಸಂಘಟನಾತ್ಮಕ ವಿಷಯಗಳ ಕುರಿತು ಚರ್ಚಿಸಿದರು.
ಪ್ರಮುಖರ ಉಪಸ್ಥಿತಿ:
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ. ವಿ. ಸದಾನಂದ ಗೌಡ, ವಿಧಾನಸಭೆಯ ಪ್ರತಿಪಕ್ಷ ನಾಯಕರಾದ ಆರ್. ಅಶೋಕ್, ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರು ಉಪಸ್ಥಿತರಿದ್ದು ಮಾರ್ಗದರ್ಶನ ನೀಡಿದರು.
ದಕ್ಷಿಣ ಕನ್ನಡದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಪ್ರಮುಖ ಮಾಜಿ ಸಚಿವರುಗಳು, ಶಾಸಕರುಗಳು, ವಿವಿಧ ಮಂಡಲಗಳ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

