Monday, March 17, 2025
HomeUncategorizedಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ, ರಾಜ್ಯ...

ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ, ರಾಜ್ಯ ಮಹಿಳಾ ನಿಲಯಕ್ಕೆ ಕೊಡುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾದ ವತಿಯಿಂದ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಡುಪಿ – ನಿಟ್ಟೂರು ರಾಜ್ಯ ಮಹಿಳಾ ನಿಲಯಕ್ಕೆ ನಿತ್ಯೋಪಯೋಗಿ ವಸ್ತುಗಳನ್ನು ವಿತರಿಸಲಾಯಿತು.

ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಅವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಮ್ಮ ಪೋಷಕರ ಸ್ಮರಣಾರ್ಥ ಮಹಿಳಾ ನಿಲಯಕ್ಕೆ ವಾಶಿಂಗ್ ಮೆಷೀನ್ ಹಸ್ತಾಂತರಿಸಿದರು.

ಬಳಿಕ ಉಡುಪಿ ಮೂಡುಸಗ್ರಿಯ ಅಂಗನವಾಡಿ ಕೇಂದ್ರ ಮತ್ತು ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಂಚುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ರಷ್ಮಿತಾ ಬಿ. ಶೆಟ್ಟಿ, ಉಪಾಧ್ಯಕ್ಷೆ ದಯಾಶಿನಿ, ಜಿಲ್ಲಾ ಮಹಿಳಾ ಮೋರ್ಚಾ ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ನಗರಸಭಾ ಸದಸ್ಯೆ ಭಾರತಿ ಪ್ರಶಾಂತ್, ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸರೋಜಾ ಶೆಣೈ, ಕಾರ್ಯದರ್ಶಿ ಶಾಂತಿ ಮನೋಜ್, ಪ್ರಮುಖರಾದ ಮಾಯಾ ಕಾಮತ್, ಸುಜಾಲ ಸತೀಶ್, ಸುಧಾ ಪೈ, ಪೂರ್ಣಿಮಾ ರತ್ನಾಕರ್, ಸುಮಾ ನಾಯ್ಕ್, ದೀಪಾ ಪೈ, ಪ್ರೀತಿ ಹಾಗೂ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮಹಿಳಾ ಮೋರ್ಚಾದ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular