ಬಿಜೆಪಿ ನಗರ ಯುವ ಮೋರ್ಚಾ: ‘ಯಕ್ಷ ಗುರು’ ಬನ್ನಂಜೆ ಸಂಜೀವ ಸುವರ್ಣರಿಗೆ ಗೌರವಾರ್ಪಣೆ

0
20

ಶ್ರೀ ಗುರು ಪೂರ್ಣಿಮಾ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ಉಡುಪಿ ನಗರಾಧ್ಯಕ್ಷ ಶ್ರೀವತ್ಸ ನೇತೃತ್ವದಲ್ಲಿ ಹಿರಿಯ ಯಕ್ಷಗಾನ ಕಲಾವಿದ, ಖ್ಯಾತ ಯಕ್ಷ ಗುರು, ಉಡುಪಿಯ ‘ಯಕ್ಷ ಸಂಜೀವ ಯಕ್ಷಗಾನ ಕೇಂದ್ರ’ದ ಮುಖ್ಯಸ್ಥರಾದ ಬನ್ನಂಜೆ ಸಂಜೀವ ಸುವರ್ಣ ಅವರನ್ನು ಅವರ ನಿವಾಸದಲ್ಲಿ ಗೌರವಿಸಿ ಗುರು ವಂದನೆ ಸಲ್ಲಿಸಲಾಯಿತು.

ಸಂಜೀವ ಸುವರ್ಣ ಅವರು ಯಕ್ಷಗಾನದ ಹಲವಾರು ಪ್ರಕಾರಗಳಲ್ಲಿ ವಿಶೇಷ ಪರಿಣತಿಯನ್ನು ಹೊಂದಿದ್ದು ನೂರಾರು ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲೆಯ ತರಬೇತಿಯನ್ನು ನೀಡಿರುತ್ತಾರೆ. ಪ್ರತಿಭಾನ್ವಿತ ಯಕ್ಷಗಾನ ಕಲಾವಿದರಾಗಿ 30ಕ್ಕೂ ಹೆಚ್ಚು ದೇಶಗಳಲ್ಲಿ ಯಶಸ್ವೀ ಪ್ರದರ್ಶನವನ್ನು ನೀಡಿ ಸೈ ಎನಿಸಿಕೊಂಡಿದ್ದಾರೆ. ಯಕ್ಷಗಾನವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಸಂಜೀವ ಸುವರ್ಣರು ಯಕ್ಷಗಾನದ ಗುರು-ಶಿಷ್ಯ ಪರಂಪರೆಯನ್ನು ಎತ್ತಿಹಿಡಿಯುತ್ತಲೇ ಯಕ್ಷಗಾನದ ಆಧುನಿಕ ರೂಪಾoತರಗಳಿಗೆ ಹೆಸರುವಾಸಿಯಾಗಿದ್ದಾರೆ. ವಿಶೇಷ ಸಾಮರ್ಥ್ಯದ ಮಕ್ಕಳಿಗೆ ಮತ್ತು ಮಾನಸಿಕ ಅಸ್ವಸ್ಥ ಮಕ್ಕಳಿಗೂ ಯಕ್ಷಗಾನ ಕಲಿಸಿರುವುದು ಅವರ ಯಕ್ಷ ಕಲಾ ನೈಪುಣ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಈ ಸಂದರ್ಭದಲ್ಲಿ ನಗರ ಯುವ ಮೋರ್ಚಾ ಉಪಾಧ್ಯಕ್ಷ ಪ್ರಜ್ವಲ್ ಪೂಜಾರಿ, ಸಂದರ್ಶ ಆಚಾರ್ಯ, ಪ್ರಣವ್ ಕಾಮತ್, ಪ್ರಧಾನ ಕಾರ್ಯದರ್ಶಿ ನಿತಿನ್ ಪೈ ಮಣಿಪಾಲ, ಕಾರ್ಯದರ್ಶಿಗಳಾದ ದೀಕ್ಷಿತ್ ಶೆಟ್ಟಿ, ನಿಕಿಲ್ ಮಡಿವಾಳ, ಹರ್ಷ ಆಚಾರ್ಯ, ಭೂಷಣ್ ಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here