Tuesday, May 13, 2025
Homeಉಡುಪಿಪೆರ್ಡೂರು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ಚುನಾವಣಾ ಪ್ರಚಾರ ಸಭೆ -...

ಪೆರ್ಡೂರು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ಚುನಾವಣಾ ಪ್ರಚಾರ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಕಾಪು ಮಂಡಲ ಬಿಜೆಪಿ ಇದರ ವತಿಯಿಂದ ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣಾ ಪೂರ್ವಭಾವಿಯಾಗಿ ಇಂದು 13-04-2024 ರಂದು ನಡೆದ ಪೆರ್ಡೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ಚುನಾವಣಾ ಪ್ರಚಾರ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಸಭೆಯಲ್ಲಿ ಶಾಸಕರು ಮಾತನಾಡಿ ಒಬ್ಬ ಸರಳ ಸಜ್ಜನಿಕೇಯ ರಾಜಕಾರಣಿಯಾದ ಕೋಟ ಶ್ರೀನಿವಾಸ ಪೂಜಾರಿ ಅವರು ನಮ್ಮ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಸಚಿವರಾಗಿದ್ದ ಸಂದರ್ಭದಲ್ಲಿ ಅವರು ಕಾಪು ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳಿಗೆ ಅನುದಾನವನ್ನು ನೀಡಿದ್ದಾರೆ. ಹಾಗಾಗಿ ಕೋಟ ಶ್ರೀನಿವಾಸ ಪೂಜಾರಿ ಅವರು ಕಾಪು ವಿಧಾನಸಭಾ ಕ್ಷೇತ್ರದಲ್ಲಿ 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಲು ನಾವು ಶ್ರಮಿಸಬೇಕು ಎಂದರು.

ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ರಘುಪತಿ ಭಟ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ವಕ್ತಾರರಾದ ಗೀತಾಂಜಲಿ ಸುವರ್ಣ, ಪೆರ್ಡೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಜಿಯಾನಂದ ಹೆಗಡೆ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ರಾಜ್ಯ ಬಿಜೆಪಿಯ ನಿಕಟಪೂರ್ವ ಉಪಾಧ್ಯಕ್ಷರಾದ ನಯನ ಗಣೇಶ್, ಉಡುಪಿ ಜಿಲ್ಲಾ ಬಿಜೆಪಿಯ ನಿಕಟಪೂರ್ವ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಮಹಿಳಾ ಆಯೋಗದ ನಿಕಟಪೂರ್ವ ಸದಸ್ಯರಾದ ಶ್ಯಾಮಲ ಕುಂದರ್ ಹಾಗೂ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular