ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ಕಿನ್ನಿಗೋಳಿ ಇನ್ನಿಲ್ಲ

0
33

ಮೂಡುಬಿದಿರೆ : ಬಿಜೆಪಿಯ ಯುವ ಮುಖಂಡ, ಕಿನ್ನಿಗೋಳಿಯ ಪ್ರತೀಕ್ ಶೆಟ್ಟಿ (40) ಅವರು ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ತಡರಾತ್ರಿ ನಿಧನರಾದರು.

ಮೂಲ್ಕಿ–ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದ ಪ್ರತೀಕ್ ಶೆಟ್ಟಿ ಅವರು ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಮೂಡುಬಿದಿರೆ ಹಾಗೂ ಮೂಲ್ಕಿ ಭಾಗದ ಜಿಲ್ಲಾ ಬಿಜೆಪಿಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಅವರು ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.

ಮೃತರು ಪತ್ನಿ, ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಕುಟುಂಬಸ್ಥರು ಹಾಗೂ ಬಂಧುಗಳ ಸಮ್ಮುಖದಲ್ಲಿ ನೆರವೇರಿತು ಎಂದು ತಿಳಿದುಬಂದಿದೆ.