ಬೆಳಗಾವಿ: ಖಾಸಗಿ ಫೋಟೊ ಬಳಸಿ ಬ್ಲಾಕ್ ಮೇಲ್ ಮಾಡಿ ಇಸ್ಲಾಂಗೆ ಮತಾಂತರ ಆಗುವಂತೆ 28 ವರ್ಷದ ಮಹಿಳೆಯೊಬ್ಬರಿಗೆ ಒತ್ತಾಯಿಸಿದ ದಂಪತಿ ಸಹಿತ ಏಳು ಮಂದಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ರಫೀಕ್ ಮತ್ತು ಆತನ ಪತ್ನಿ ವಿರುದ್ಧ ಪ್ರಕರಣ ದಾಖಲಾಗಿದೆ. ಇಬ್ಬರು ಸಂತ್ರಸ್ತೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದು, ನಂತರ ಆಕೆಯ ಖಾಸಗಿ ಫೋಟೊಗಳನ್ನು ತೋರಿಸಿ ಇಸ್ಲಾಂಗೆ ಮತಾಂತರವಾಗುವಂತೆ ಬ್ಲಾಕ್ ಮೇಲ್ ಮಾಡುತ್ತಿದ್ದರು ಎಂದು ದೂರಲಾಗಿದೆ. ಮೂವರೂ ಒಟ್ಟಿಗೆ ವಾಸಿಸುತ್ತಿದ್ದರು. ವರ್ಷದ ಹಿಂದೆ ಆಕೆಯ ಮೇಲೆ ರಫೀಕ್ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ ಮತಾಂತರಕ್ಕೆ ಒತ್ತಾಯಿಸಿದ್ದಾನೆ. ಕುಂಕುಮ ಧರಿಸದಂತೆ ಮತ್ತು ಬುರ್ಖಾ ಧರಿಸುವಂತೆ, ನಮಾಜ್ ಮಾಡುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ಸಂತ್ರಸ್ತೆಯು ತನ್ನ ಪತಿಗೆ ವಿಚ್ಛೇದನ ನೀಡಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ತನ್ನೊಂದಿಗೆ ವಾಸಿಸುವಂತೆ ರಫೀಕ್ ಒತ್ತಾಯಿಸಿದ್ದಾನೆ. ಇಲ್ಲದಿದ್ದರೆ ತನ್ನ ಖಾಸಗಿ ಫೋಟೊ ಬಹಿರಂಗ ಪಡಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಿರುವಾಗಿ ಪೊಲೀಸರು ಹೇಳಿದ್ದಾರೆ.
ಮಹಿಳೆಯ ದೂರಿನ ಆಧಾರದಲ್ಲಿ ಸವದತ್ತಿಯಲ್ಲಿ ಏಳು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ಪೊಲೀಸರು ಕೈಗೆತ್ತಿಕೊಂಡಿದ್ದಾರೆ.