ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಜನರ ರಕ್ತದ ಬಣ್ಣ ಕೇಸರಿ, ಅವರನ್ನು ಕುಯ್ದ್ರೆ ಕೆಂಪು ಬಣ್ಣ ಬರುವುದಲ್ಲ, ಬದಲಾಗಿ ಕೇಸರಿ ಬಣ್ಣದ ರಕ್ತ ಎಂದು ಬಿಜೆಪಿ ನಾಯಕಿ ಮಾಳವಿಕಾ ಅವಿನಾಶ್ ಹೇಳಿದ್ದಾರೆ. ಪುತ್ತೂರಿನಲ್ಲಿ ನಡೆದ ನಾರಿಶಕ್ತಿ ಮಹಿಳಾ ಸಮಾವೇಶದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ 28ಕ್ಕೆ 28 ಸೀಟುಗಳನ್ನು ಗೆಲ್ಲುವ ಸವಾಲು ನಮ್ಮ ಮುಂದಿದೆ ಎಂದು ಅವರು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದರಲ್ಲಿ ಸಂದೇಹವಿಲ್ಲ ಎಂದು ಅವರು ತಿಳಿಸಿದ್ದಾರೆ. ಮತ್ತೊಮ್ಮೆ ನಾನು ಬರುವಷ್ಟರಲ್ಲಿ ಬ್ರಿಜೇಶ್ ಚೌಟ ಸಂಸದರಾಗಿರಬೇಕು ಎಂದು ಅವರು ಕರೆ ನೀಡಿದ್ದಾರೆ.