ಬಿಎಂಟಿಸಿ ಬಸ್ ಹರಿದು ಮಹಿಳೆ ಸಾವು
ಬೆಂಗಳೂರಿನ ನಾಯಂಡನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿನ ಬಾಗಿಲು ಹಠಾತ್ತಾಗಿ ತೆರೆದ ಕಾರಣ ಬೈಕ್ನಿಂದ ಕೆಳಗೆ ಬಿದ್ದ ಮಹಿಳೆಯ ಮೇಲೆ ಬಿಎಂಟಿಸಿ ಬಸ್ ಹರಿದಿದೆ. ಕಾಮಾಕ್ಷಿಪಾಳ್ಯದ 42 ವರ್ಷದ ಸರೋಜಾ ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬ್ಯಾಟರಾಯನಪುರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೈಕ್ನಿಂದ ಕೆಳಗೆ ಬಿದ್ದ ಮಹಿಳೆ ಮೇಲೆ ಬಿಎಂಟಿಸಿ (BMTC) ಹರಿದ ಘಟನೆ ಬೆಂಗಳೂರಿನ ನಾಯಂಡನಹಳ್ಳಿ ಬಳಿ ನಡೆದಿದೆ. ಕಾಮಾಕ್ಷಿಪಾಳ್ಯದ ನಿವಾಸಿ ಸರೋಜಾ (42) ಮೃತ ದುರ್ದೈವಿ. ಜ್ಞಾನಭಾರತಿಯಲ್ಲಿ ಮದುವೆ ಮುಗಿಸಿಕೊಂಡು ರಾತ್ರಿ 9.30 ರ ಸುಮಾರಿಗೆ ಹೋಂಡಾ ಆ್ಯಕ್ಟಿವಾದಲ್ಲಿ ಸೋದರನ ಜೊತೆ ಬೈಕ್ನಲ್ಲಿ ಸರೋಜ ಮನೆಗೆ ಹೊರಟಿದ್ದರು.
ದಾರಿಯಲ್ಲಿ ಮುಂದೆ ನಿಂತಿದ್ದ ಕಾರಿನ ಡೋರ್ ಏಕಾಏಕಿ ತೆರೆದಿದೆ. ಇದರಿಂದ, ಡೋರ್ಗೆ ಟಚ್ ಆಗಿ ಬೈಕ್ನ ಹಿಂಬದಿ ಕುಳತಿದ್ದ ಸರೋಜಾ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂದೆ ಬರುತ್ತಿದ್ದ ಬಿಎಂಟಿಸಿ ಬಸ್ ಸರೋಜಾ ಮೇಲೆ ಹರಿದಿದೆ. ಸರೋಜಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
2024ರಲ್ಲಿ ಒಂದೇ ತಿಂಗಳಲ್ಲಿ 4 ಸಾವು
ಅಕ್ಟೋಬರ್ 09 : ಬಿಎಂಟಿಸಿಗೆ ಮೂರು ವರ್ಷದ ಮಗು ಬಲಿ
ಅಕ್ಟೋಬರ್ 14 : ಬಸ್ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು
ಅಕ್ಟೋಬರ್ 22 : ಬೈಕ್ಗೆ ಬಸ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು
ಅಕ್ಟೋಬರ್ 29 : ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಬಲಿ
ಡಿಸೆಂಬರ್ 28 : ಬಿಎಂಟಿಸಿ ಬಸ್ ಡಿಕ್ಕಿಯಾಗಿ ಪಾದಚಾರಿ ಮಹಿಳೆ ಸಾವು