ಕಡಲಕೆರೆ ನಿಸರ್ಗಧಾಮದಲ್ಲಿ ಬೋಟಿಂಗ್‌ಗೆ ಚಾಲನೆ- ಮೀನು ಮರಿಗಳ ಸಮರ್ಪಣೆ

0
49

ಮೂಡುಬಿದಿರೆ: ಪರಿಸರ ತಜ್ಞ ಡಾ.ಎಲ್.ಸಿ ಸೋನ್ಸ್ ಅವರ ದೂರದೃಷ್ಟಿಯಿಂದ ಸ್ಥಾಪನೆಯಾದ ಕಡಲಕೆರೆ ನಿಸರ್ಗಧಾಮ ಇಂದು ಅಭಿವೃದ್ಧಿ ಪಥದಲ್ಲಿ ಸಾಗಿ ಜನಾಕರ್ಷಣೆಯ ಕೇಂದ್ರವಾಗಿದೆ. ಕಡಲಿನ ರೀತಿಯಲ್ಲಿ ಕಾಣುವ ಈ ಕೆರೆಯಲ್ಲಿ ವರ್ಷದ 365 ದಿನಗಳು ನೀರು ನಿಲ್ಲಿಸಿ ಬೋಟಿಂಗ್ ವ್ಯವಸ್ಥೆ ಮಾಡುವ ದೊಡ್ಡ ಯೋಜನೆಗೆ ಸರ್ಕಾರದ ಮಟ್ಟದಲ್ಲಿ ಕೆಲಸಗಳಾಗುತ್ತಿದೆ. ಇನ್ನು ಮೂರು ತಿಂಗಳೊಳಗೆ ಈ ಯೋಜನೆಯ ಅಭಿವೃದ್ಧಿ ಕೆಲಸಗಳನ್ನು ಪ್ರಾರಂಭಿಸಲಿದ್ದೇವೆ ಎಂದು ಶಾಸಕ ಉಮಾನಾಥ ಎ.ಕೋಟ್ಯಾನ್ ಹೇಳಿದರು.
ಅರಣ್ಯ ಇಲಾಖೆ ಕುಂದಾಪುರ ವಿಭಾಗ, ಮೂಡುಬಿದಿರೆ ವಲಯ ಹಾಗೂ ಮೂಡುಬಿದಿರೆ ರೋಟರಿ ಕ್ಲಬ್ ಸಹಯೋಗದಲ್ಲಿ ಮೂಡುಬಿದಿರೆ ಒಂಟಿಕಟ್ಟೆಯಲ್ಲಿರುವ ಕಡಲಕೆರೆ ನಿಸರ್ಗಧಾಮದಲ್ಲಿ ಬುಧವಾರ ಬೋಟಿಂಗ್ ವ್ಯವಸ್ಥೆ ಉದ್ಘಾಟಿಸಿ ಮಾತನಾಡಿದರು. ಪಿಲಿಕುಳ ನಿಸರ್ಗಧಾಮದ ಮಾದರಿಯಲ್ಲಿ ಕಡಲಕೆರೆಯನ್ನು ಅಭಿವೃದ್ಧಿಪಡಿಸುವ ಚಿಂತನೆ ಇದೆ. ಇದರ ಪಕ್ಕದಲ್ಲೇ ಕಂಬಳ ನಡೆಯುವ ರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದ ಅಭಿವೃದ್ಧಿಯನ್ನು ಮಾಡಲಾಗುತ್ತಿದ್ದು, ಕಳೆದ ವರ್ಷ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಆವರಣಗೋಡೆಯನ್ನು ನಿರ್ಮಿಸಿದ್ದೇವೆ ಎಂದರು.
ಕಾಟ್ಲಾ ಮತ್ತು ರೋಹೋ ಜಾತಿಯ ಇಪ್ಪತ್ತು ಸಾವಿರ ಮೀನಿನ ಮರಿಗಳನ್ನು ಕೆರೆಗಳು ಸಮರ್ಪಿಸಲಾಯಿತು. ವನಮಹೋತ್ಸವವನ್ನು ಆಚರಿಸಲಾಯಿತು.
ಪುರಸಭೆ ಅಧ್ಯಕ್ಷೆ ಜಯಶ್ರೀ ಕೇಶವ, ಉಪಾಧ್ಯಕ್ಷ ನಾಗರಾಜ ಪೂಜಾರಿ, ಸದಸ್ಯ, ರೋಟರಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪಿ.ಕೆ ಥೋಮಸ್, ಮಾಜಿ ಅಧ್ಯಕ್ಷ ಡಾ.ಮುರಳೀ ಕೃಷ್ಣ, ತಹಸೀಲ್ದಾರ್ ಶ್ರೀಧರ ಮುಂದಲಮನಿ, ತಾಲೂಕು ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ, ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ ಹೆಗ್ಡೆ, ರೋಟರಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ನಾರಾಯಣ ಪಿ.ಎಂ, ಸಿ.ಎಚ್ ಗಫೂರ್, ಮುಖ್ಯಾಧಿಕಾರಿ ಇಂದು.ಎA, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್, ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ವಕೀಲ ಕೆ.ಆರ್ ಪಂಡಿತ್, ಬೋಟಿಂಗ್ ವ್ಯವಸ್ಥಾಪಕ ನಝೀರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here