ಕಾರ್ಕಳ : ಕಾರ್ಕಳದ ಎಣ್ಣೆಹೊಳೆ ಸೇತುವೆಯ ಕೆಳಭಾಗದಲ್ಲಿ ನದಿಯ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತರು ನೀಲಿ ಬಣ್ಣದ ಉದ್ದನೆಯ ಗೆರೆಗಳಿರುವ ಶರ್ಟ್, ಬಿಳಿ ಮಿಶ್ರಿತ ಹಳದಿ ಬಣ್ಣದ ಪ್ಯಾಂಟ್ ಹಾಗೂ ನೀಲಿ ಬಣ್ಣದ ಶೂ ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚಲು ಸಂಬಂಧಪಟ್ಟವರು ಮುಂದಾಗಬೇಕಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

