ದಸರಾದಲ್ಲಿ ಬಲೂನ್ ಮಾರಲು ಬಂದಿದ್ದ ಬಾಲಕಿ ಶವ ಪತ್ತೆ

0
79


ಮೈಸೂರು: ವಸ್ತು ಪ್ರದರ್ಶನ ಮೈದಾನದಲ್ಲಿ ದಸರಾದಲ್ಲಿ ಬಲೂನ್ ಮಾರಲು ಬಂದಿದ್ದ ಬಾಲಕಿಯ ಶವ ದೊರೆತಿದೆ. ದೊಡ್ಡಕೆರೆ ಮೈದಾನದ ಸುತ್ತಲಿನ ರಸ್ತೆಯಲ್ಲಿ ದಸರಾದ ವ್ಯಾಪಾರಕ್ಕಾಗಿ ಬಂದ ವ್ಯಾಪಾರಿಗಳು ನೆಲೆಸಿದ್ದರು. ಬುಧವಾರ ಚಾಮುಂಡೇಶ್ವರಿ ದೇವಾಲಯದ ತೆಪ್ಪೋತ್ಸವ ಮುಗಿಸಿ, ಗುರುವಾರ ಬೇರೆ ಕಡೆ ತೆರಳಲು ಸಿದ್ಧತೆಯಲ್ಲಿದ್ದರು.
ರಾತ್ರಿ ವ್ಯಾಪಾರ ಮುಗಿಸಿ ಬಂದ ಗುಲ್ಬರ್ಗಾ ಮೂಲದ ಸುಮಾರು 10 ರಿಂದ 12 ವರ್ಷ ಬಾಲಕಿ ತಂದೆ- ತಾಯಿಯೊಂದಿಗೆ ಮಲಗಿದ್ದಳು. ಮುಂಜಾನೆ ಮಳೆ ಬಂದು ಎಲ್ಲರೂ ಎದ್ದಾಗ ಬಾಲಕಿ ಕಾಣೆಯಾಗಿದ್ದಳು, ಹುಡುಕಾಡಿದಾಗ ಟೆಂಟ್ ನಿಂದ 50 ಮೀ ದೂರದಲ್ಲಿರು ಮಣ್ಣಿನ ರಾಶಿ ಬಳಿ ಬಾಲಕಿ ಶವ ಪತ್ತೆಯಾಗಿದೆ’ ಎಂದು ಪೊಲೀಸರು ತಿಳಿಸಿದರು. ಸ್ಥಳಕ್ಕೆ ಶ್ವಾನ ದಳ ಆಗಮಿಸಿದ್ದು, ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಯುತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here