ನದಿ ಬಳಿ ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಮಹಿಳೆಯ ಶವ ಪತ್ತೆ

0
218

ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸಮೀಪದ ಸೌರ್ಪಣಿಕಾ ನದಿ ಬಳಿ ಕಣ್ಮರೆಯಾಗಿದ್ದ ಬೆಂಗಳೂರು ಮೂಲದ ಮಹಿಳೆಯ ಮೃತದೇಹ ಪತ್ತೆಯಾಗಿದೆ.

ಮೃತ ಮಹಿಳೆಯನ್ನು ಬೆಂಗಳೂರಿನ ವಸುಧಾ (46) ಎಂದು ಗುರುತಿಸಲಾಗಿದ್ದು, ಇವರು ಕೊಲ್ಲೂರು ದೇವಸ್ಥಾನಕ್ಕೆ ಆಗಮಿಸಿದ್ದು,ಅಲ್ಲೇ ಕಾರು ನಿಲ್ಲಿಸಿ ಸೌರ್ಪಣಿಕ ನದಿ ಬಳಿ ನಾಪತ್ತೆಯಾಗಿದ್ದರು.

ಇವರು ಕಾಲು ಜಾರಿ ಬಿದ್ದು ನೀರಿನ ರಭಸಕ್ಕೆ ಕೊಚ್ಚಿಹೋಗಿರಬಹುದು ಎಂದು ಶಂಕಿಸಲಾಗಿತ್ತು. ನಾಪತ್ತೆಯಾದ ಮಹಿಳೆಗಾಗಿ ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಹಾಗೂ ಅಗ್ನಿಶಾಮಕದಳ ನಿನ್ನೆಯಿಂದ ತೀವ್ರ ಹುಡುಕಾಟ ನಡೆಸುತ್ತು. ಇದೀಗ ಮಹಿಳೆಯ ಮೃತದೇಹ ಕೊಲ್ಲೂರು ದೇವಸ್ಥಾನದಿಂದ ಸುಮಾರು ಮೂರು ಕಿ.ಮೀ.ದೂರದಲ್ಲಿ ಪತ್ತೆಯಾಗಿದೆ.

ಕೊಲ್ಲೂರು ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಗಳೊಂದಿಗೆ ಈಶ್ವರ ಮಲ್ಪೆ ಹಾಗೂ ಸ್ಥಳೀಯ ಪ್ರದೀಪ್‌ ಭಟ್‌ ಮೊದಲಾದವರು ಹುಡುಕಾಟದಲ್ಲಿ ತೊಡಗಿಕೊಂಡಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

By

 Prime Tv News Desk

 –

 August 30, 2025

LEAVE A REPLY

Please enter your comment!
Please enter your name here