Saturday, February 15, 2025
Homeರಾಷ್ಟ್ರೀಯಉಕ್ಕಿನ ಕಾರ್ಖಾನೆಯಲ್ಲಿ ಭೀಕರ ಬಾಯ್ಲರ್‌ ಸ್ಫೋಟ | 22 ಮಂದಿಗೆ ಗಾಯ; ಹಲವರು ಗಂಭೀರ

ಉಕ್ಕಿನ ಕಾರ್ಖಾನೆಯಲ್ಲಿ ಭೀಕರ ಬಾಯ್ಲರ್‌ ಸ್ಫೋಟ | 22 ಮಂದಿಗೆ ಗಾಯ; ಹಲವರು ಗಂಭೀರ

ಮುಂಬೈ: ಮಹಾರಾಷ್ಟ್ರದ ಜಲ್ನಾ ನಗರದ ಎಂಐಡಿಸಿ ಪ್ರದೇಶದಲ್ಲಿರುವ ಉಕ್ಕಿನ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಸುಮಾರು 22 ಕಾರ್ಮಿಕರು ಗಾಯಗೊಂಡಿದ್ದಾರೆ. ಇದರಲ್ಲಿ ಮೂವರು ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಜ್ ಕೇಸರಿ ಸ್ಟೀಲ್ ಮಿಲ್‍ನಲ್ಲಿ ಮಧ್ಯಾಹ್ನ ಈ ಸ್ಫೋಟ ಸಂಭವಿಸಿದೆ. ಈ ವೇಳೆ ಕರಗಿದ ಕಬ್ಬಿಣ ಕಾರ್ಮಿಕರ ಮೇಲೆ ಬಿದ್ದಿದೆ. ಮೂವರನ್ನು ಛತ್ರಪತಿ ಸಂಭಾಜಿನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಖಾನೆಯು ಸ್ಕ್ರ್ಯಾಪ್‍ನಿಂದ ಸ್ಟೀಲ್ ಕಂಬಿಗಳನ್ನು ತಯಾರಿಸುತ್ತದೆ. ಸ್ಫೊಟಕ್ಕೆ ಕಾರಣವೇನು ಎಂಬುದರ ಬಗ್ಗೆ ಮಾಹಿತಿ ದೊರೆತಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸದ್ಯ ಗಾಯಗೊಂಡ ಕಾರ್ಮಿಕರ ಹೇಳಿಕೆ ದಾಖಲಿಸಿರುವ ಪೊಲೀಸರು, ಕಂಪನಿ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular