ಮೈಸೂರು: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ನ ಮೈತ್ರಿ ಅಭ್ಯರ್ಥಿ ಎಸ್.ಎಲ್. ಬೋಜೇಗೌಡ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಬೋಜೇಗೌಡ ಗೆಲುವಿನ ನಗೆ ಬೀರಿದ್ದಾರೆ. ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, 5.267 ಮತಗಳ ಅಂತರದಿಂದ ಅವರು ಗೆದ್ದಿದ್ದಾರೆ. ಬೋಜೇಗೌಡ 9,330 ಮತಗಳನ್ನು ಪಡೆದಿದ್ದಾರೆ. ಒಟ್ಟು 19,479 ಮತಗಳು ಚಲಾವಣೆಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್‌ಗೆ 4,562 ಮತಗಳು ಲಭ್ಯವಾಗಿವೆ.