ಮೂಡಬಿದಿರೆ :”ಸ್ವಚ್ಛತಾ ಹೀ ಸೇವಾ” ಆಂದೋಲನ ಮತ್ತು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ “ಸ್ವಚ್ಚತೆಯೆಡೆಗೆ ದಿಟ್ಟ ಹೆಜ್ಜೆ” ಅಭಿಯಾನದಡಿ ಸ್ವಚ್ಚತಾ ಶ್ರಮದಾನ ಕಾರ್ಯಕ್ರಮವನ್ನು ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಿನಾಂಕ 18/09/2024 ರಂದು ಹಮ್ಮಿಕೊಳ್ಳಲಾಯಿತು.
ಸ್ವಚ್ಚತೆಗೆ ಸಂಬಂಧಿಸಿದ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಸದ್ರಿ ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರಾದ ಅಮಿತಾ, ಉಪಾಧ್ಯಕ್ಷರಾದ ಪ್ರವೀಣ್ ಸಿಕ್ವೇರಾ, ಪಂಚಾಯತ್ ಸದಸ್ಯರಾದ ಸುಕೇಶ್ ಶೆಟ್ಟಿ, ಹರಿಣಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ರಕ್ಷಿತಾ ಡಿ., ದ್ವಿತೀಯ ದರ್ಜೆ ಲೆಕ್ಕಸಹಾಯಕರಾದ ಮೋಹಿನಿ, ತಾಲೂಕು ಐಇಸಿ ಸಂಯೋಜಕರಾದ ಅನ್ವಯ, ಪಂಚಾಯತ್ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು,ಪ್ರಾಥಮಿಕ ಆರೋಗ್ಯಕೇಂದ್ರದ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟ ದ ಸದಸ್ಯರು ಉಪಸ್ಥಿತರಿದ್ದರು.
“ಸ್ವಚ್ಛತಾ ಹೀ ಸೇವಾ”ಆಂದೋಲನ ಮತ್ತು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ “ಸ್ವಚ್ಚತೆಯೆಡೆಗೆ ದಿಟ್ಟ ಹೆಜ್ಜೆ”
RELATED ARTICLES