ಲಕ್ನೋ: ಆಲಿಗಢ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಜ.9ರಂದು ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ವಿಶ್ವವಿದ್ಯಾಲಯದ ಅಧಿಕಾರಿಗಳು ಮತ್ತು ಕಾನೂನು ಜಾರಿ ಸಂಸ್ಥೆಗಳು ತ್ವರಿತ ಕ್ರಮ ಕೈಗೊಂಡಿದ್ದಾರೆ.
2 ಲಕ್ಷ ರೂಪಾಯಿ ಸುಲಿಗೆ ಬೇಡಿಕೆಯೊಡ್ಡಿ ಇಮೇಲ್ ಬಂದಿದ್ದು, ಕ್ಯಾಂಪಸ್‌ನಾದ್ಯಂತ ಸಂಪೂರ್ಣ ಶೋಧಕಾರ್ಯ ನಡೆಸಲಾಯಿತು. ವಿಶ್ವವಿದ್ಯಾಲಯದ ಅಧಿಕಾರಿಗಳು ಬೆದರಿಕೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ, ಇಮೇಲ್ ಮೂಲದ ಬಗ್ಗೆ ತನಿಖೆ ನಡೆಸಲು ಬಾಂಬ್ ನಿಷ್ಕ್ರಿಯ ಘಟಕ, ಶ್ವಾನ ದಳ ಮತ್ತು ಸೈಬರ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ವೃತ್ತ ಅಧಿಕಾರಿ ಅಭಯ್ ಕುಮಾರ್ ಪಾಂಡೆ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ವಿಶ್ವವಿದ್ಯಾಲಯದ ಅಧಿಕಾರಿಗಳು ಬಾಂಬ್ ಬೆದರಿಕೆ ಮೇಲ್ ಬಗ್ಗೆ ನಮಗೆ ಮಾಹಿತಿ ನೀಡಿದ್ದಾರೆ. ಬಾಂಬ್ ನಿಷ್ಕ್ರಿಯ ಘಟಕ ಮತ್ತು ಶ್ವಾನ ದಳವನ್ನು ತಕ್ಷಣವೇ ನಿಯೋಜಿಸಲಾಯಿತು. ಕ್ಯಾಂಪಸ್‌ನಲ್ಲಿರುವ ಎಲ್ಲಾ ಪ್ರತ್ಯೇಕ ಸ್ಥಳಗಳನ್ನು ಪೊಲೀಸರು ಸಂಪೂರ್ಣವಾಗಿ ಶೋಧಿಸಿದ್ದಾರೆ. ಅಲ್ಲದೆ, ಸೈಬರ್ ತಂಡಗಳು ಇಮೇಲ್ ಮೂಲದ ಬಗ್ಗೆಯೂ ತನಿಖೆ ನಡೆಸುತ್ತಿವೆ ಎಂದು ಹೇಳಿದರು.