ಮಂಗಳೂರು: ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆಯ ಇ ಮೇಲ್ ಬಂದಿರುವ ಬಗ್ಗೆ ವರದಿಗಳಾಗಿವೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಬೆದರಿಕೆಗೆ ಸಂಬಂಧಿಸಿ ವಿಮಾನ ನಿಲ್ದಾಣ ಅಧಿಕಾರಿಗಳು ಪೊಲೀಸ್ ದೂರು ನೀಡಿದ್ದಾರೆ. ಏ 29ರಂದು ಇ ಮೇಲ್ ಸ್ವೀಕರಿಸಲಾಗಿದೆ ಎಂದು ಹೇಳಲಾಗಿದೆ.
ವಿಮಾನ ನಿಲ್ದಾಣದ ಮೂರು ಸ್ಥಳಗಳಲ್ಲಿ ಸ್ಫೋಟಕ ಸಾಧನಗಳನ್ನು ಇರಿಸಲಾಗಿದೆ ಎಂದು ಇಮೇಲ್ ಉಲ್ಲೇಖಿಸಿದೆ. ಇ ಮೇಲ್ ನ ಮೂಲದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.