Saturday, July 20, 2024
Homeರಾಷ್ಟ್ರೀಯಬಾಂಬ್ ಬೆದರಿಕೆ | ಪ್ರತ್ಯೇಕ ಪ್ರದೇಶಕ್ಕೆ ಇಂಡಿಗೋ ವಿಮಾನ ಸ್ಥಳಾಂತರ

ಬಾಂಬ್ ಬೆದರಿಕೆ | ಪ್ರತ್ಯೇಕ ಪ್ರದೇಶಕ್ಕೆ ಇಂಡಿಗೋ ವಿಮಾನ ಸ್ಥಳಾಂತರ

ನವದೆಹಲಿ: ವಿಮಾನವೊಂದಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ, ಪರಿಶೀಲನೆಗಾಗಿ ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಿಸಿದ ಘಟನೆ ನಡೆದಿದೆ. ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಅದನ್ನು ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯಿಂದ ವಾರಣಾಸಿಗೆ 6ಇ2211 ವಿಮಾನವು ಇಂದು ಮುಂಜಾನೆ ಹೊರಟಿತ್ತು. ಈ ವೇಳೆ ದೆಹಲಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಬಂದಿದೆ. ತಕ್ಷಣ ಪ್ರಯಾಣಿಕರನ್ನು ತುರ್ತು ಬಾಗಿಲಿನ ಮೂಲಕ ಸ್ಥಳಾಂತರಿಸಲಾಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.

ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಕ್ಷಿಪ್ರ ಕಾರ್ಯಾಚರಣೆ ತಂಡವನ್ನು ನಿಯೋಜಿಸಲಾಗಿದೆ. ಪರಿಶೀಲನೆಯ ವೇಳೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ.  

RELATED ARTICLES
- Advertisment -
Google search engine

Most Popular