ಬೆಂಗಳೂರು: ಇತ್ತೀಚಿಗೆ ಬಾಂಬ್ ಬೆದರಿಕೆ ಕರೆಗಳು ಹಾಗೂ ಇಮೇಲ್ಗಳು ಹೆಚ್ಚುತ್ತಿದೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನ 40ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಮಾಡಿದ್ರು, ಇದೀಗ ಬೆಂಗಳೂರಿ ಮತ್ತೊಂದು ಪ್ರತಿಷ್ಠಿತ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ವರ್ತೂರು ಸಮೀಪದ ಕ್ರಿಸಲಿಸ್ ಹೈಸ್ಕೂಲ್ಗೆ ಬಾಂಬ್ ಬೆದರಿಕೆ ಪತ್ರ ಬಂದಿದೆ.
ಬಾಂಬ್ ಬೆದರಿಕೆ- ಶಾಲೆಗೆ ರಜೆ ಕೊಟ್ಟ ಆಡಳಿತ ಮಂಡಳಿ
ವರ್ತೂರು ಸಮೀಪದ ಕ್ರಿಸಲಿಸ್ ಹೈಸ್ಕೂಲ್ಗೆ ಇ- ಮೇಲ್ ಮೂಲಕ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಬಂದಿದೆ. ಮೇಲ್ ನೋಡಿದ ಬಳಿಕ ಎಚ್ಚೆತ್ತ ಶಾಲಾ ಆಡಳಿತ ಮಂಡಳಿ ಶಾಲೆಗೆ ರಜೆ ನೀಡಿದ ಮಕ್ಕಳನ್ನ ಸುರಕ್ಷಿತವಾಗಿ ಮನೆಗೆ ಕಳಿಸಿದೆ. ತಕ್ಷಣ ಶಾಲೆಯವರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಾಂಬ್ ನಿಷ್ಕ್ರೀಯ ದಳದಿಂದ ಪರಿಶೀಲನೆ
ವರ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶ್ವಾನದಳ ಹಾಗೂ ಬಾಂಬ್ ನಿಷ್ಕ್ರೀಯ ದಳದಿಂದ ಪರಿಶೀಲನೆ ನಡೆಸಲಾಗ್ತಿದೆ. ಪೊಲೀಸರ ಪರಿಶೀಲನೆ ವೇಳೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ ಎನ್ನಲಾಗ್ತಿದೆ. ದೂರು ದಾಖಲಿಸಿಕೊಂಡ ವರ್ತೂರು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.