ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ..! ಭದ್ರತೆ ಹೆಚ್ಚಳ

0
35

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆಯ ಇಮೇಲ್ ಬಂದಿದೆ. ಹೀಗಾಗಿ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ.

roadkill kyo ಹೆಸರಿನ ಇ-ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿದ್ದು, ತಕ್ಷಣ ಬಾಂಬ್‌ ತಪಾಸಣಾ ದಳ ಮತ್ತು ಭದ್ರತಾ ಸಿಬ್ಬಂದಿ ಜೊತೆ ಸಭೆ ನಡೆಸಿ, ನಿಲ್ದಾಣಕ್ಕೆ ಬಿಗಿ ಭದ್ರತೆ ಒದಗಿಸಿದ್ದಾರೆ.

ರಾಜ್ಯದ ಹುಬ್ಬಳ್ಳಿ, ಬೆಳಗಾವಿ, ಮಂಗಳೂರು ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಕುರಿತು ಭಾನುವಾರ ಮಧ್ಯಾಹ್ನ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆಯಾಗಿದೆ. ವಿಮಾನ ನಿಲ್ದಾಣದ ಆವರಣ ಪ್ರವೇಶಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಮತ್ತು ಸಾರ್ವಜನಿಕರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು, ಆಂತರಿಕ ಭದ್ರತಾ ಸಿಬ್ಬಂದಿ ಮತ್ತು ಗುಪ್ತಚರ ಇಲಾಖೆ ಸಿಬ್ಬಂದಿ ನಿಗಾ ವಹಿಸಿದ್ದಾರೆ.

LEAVE A REPLY

Please enter your comment!
Please enter your name here