ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಘಟನೆಯನ್ನು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಅಧ್ಯಕ್ಷರ ಹೇಳಿಕೆ : “ನ್ಯಾಯಾಲಯವು ನ್ಯಾಯದ ದೇವಾಲಯ. ಇಂತಹ ಬೆದರಿಕೆಗಳು ನ್ಯಾಯಾಂಗ ವ್ಯವಸ್ಥೆಯ ಮೇಲೆ ಭಯದ ವಾತಾವರಣ ಸೃಷ್ಟಿಸುವ ದುರುದ್ದೇಶದ ಕೃತ್ಯ. ಇದು ನ್ಯಾಯಾಂಗ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುವ ಪ್ರಯತ್ನ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಲೀಸರಿಗೆ ಮನವಿ : ಬೆದರಿಕೆಯ ಹಿಂದಿರುವ ವ್ಯಕ್ತಿ/ಸಂಘಟನೆಯನ್ನು ಶೀಘ್ರವಾಗಿ ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ನ್ಯಾಯಾಲಯದ ಭದ್ರತೆಯನ್ನು ಇನ್ನಷ್ಟು ಬಲಪಡಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ವರದಿ ವಿನೋದ್ ಶೆಟ್ಟಿ ಉಡುಪಿ

