ಕಲ್ಲಡ್ಕ : ಶಿಕ್ಷಣವೆಂದರೆ ವ್ಯಕ್ತಿಯಲ್ಲಿರುವ ದೈವಿ ಶಕ್ತಿಯ ಅನಾವರಣ ಅದನ್ನು ಹೊರತೆಗೆಯುವ ಕೆಲಸ ಪೋಷಕರು ಶಿಕ್ಷಕರು ವಿದ್ಯಾಭಿಮಾನಿಗಳಿಂದಾಗಬೇಕು ಎಂದು ಡಾಕ್ಟರ್ ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು.
ಅವರು ಶುಕ್ರವಾರ ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಂಡಾಲ ಇಲ್ಲಿ ಎಂ ಆರ್ ಪಿ ಎಲ್ ಸಂಸ್ಥೆಯ ಸಿ ಎಸ್ ಆರ್ ಅನುದಾನದಿಂದ ಮತ್ತು ಶಾಲಾಭಿವೃದ್ಧಿ ಸಮಿತಿ, ವಿವೇಕಾನಂದ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಇತರ ಸಂಘ ಸಂಸ್ಥೆ ದಾನಿಗಳ ಅನುದಾನದ ನೆರವೆನಿಂದ ನೂತನವಾಗಿ ನಿರ್ಮಿಸಿದ ತರಗತಿ ಕೊಠಡಿಗಳ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.
ಒಟ್ಟು ಮೂರು ತರಗತಿ ಕೊಠಡಿಗಳು ನಿರ್ಮಾಣವಾಗಿದ್ದು ಬಂಟ್ವಾಳ ಕ್ಷೇತ್ರ ಶಾಸಕ ರಾಜೇಶ್ ನೈಕ್ ಒಂದು ತರಗತಿ ಕೊಠಡಿ, ಎಂ ಆರ್ ಪಿ ಎಲ್ ನ ಪ್ರದೀಪ್ ಕುಮಾರ್ ಒಂದು ಕೊಠಡಿಯನ್ನು , ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಎಂ ಜಿ ಒಂದು ಕೊಠಡಿಯನ್ನು ಉದ್ಘಾಟಿಸಿ ಶಾಲೆಗೆ ಹಸ್ತಾಂತರಿಸಿದರು.
ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮ ಫಲಕಗಳ ಅನಾವರಣ ಮಾಡಿ ಮಾತನಾಡಿ ಪ್ರಸ್ತುತ ಕಾಲಘಟ್ಟದಲ್ಲಿ ಮೂರು ನಾಲ್ಕು ಗ್ರಾಮ ಒಟ್ಟು ಸೇರಿಸಿ ಒಂದು ಮಾದರಿ ಶಾಲೆ ನಿರ್ಮಾಣವಾಗುವ ಅಗತ್ಯತೆ ಇದ್ದು ಈ ಮೂಲಕ ಉತ್ತಮ ಶಿಕ್ಷಣ ನೀಡಲು ಸಾಧ್ಯ ಈ ಬಗ್ಗೆ ಕರ್ನಾಟಕ ರಾಜ್ಯ ಶಿಕ್ಷಣ ಮಂತ್ರಿಗೂ ಮನವರಿಕೆ ಮಾಡಲಾಗುವುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ ವಹಿಸಿದ್ದರು.ಈ ಸಂದರ್ಭದಲ್ಲಿ 1979ರಲ್ಲಿ ಬೊಂಡಾಲ ಸರಕಾರಿ ಶಾಲೆ ಸ್ಥಾಪನೆಗೆ ಶ್ರಮಿಸಿದ ಮಹನೀಯರನ್ನು ಗೌರವಿಸಲಾಯಿತು. ಕಟ್ಟಡ ನಿರ್ಮಿಸಿದ ಕಂಟ್ರಾಕ್ಟ್ ದಾರ ಗೋಪಾಲ್ ನೆಲ್ಲಿ ಹಾಗೂ ಎಂ ಆರ್ ಪಿ ಎಲ್ ನ ಪ್ರದೀಪ್ ರವರನ್ನು ಗೌರವಿಸಿ ಅಭಿನಂದಿಸಲಾಯಿತು.
ವಿಶೇಷವಾಗಿ ಸಹಕರಿಸಿದ ಪದ್ಮನಾಭ ಕೊಟ್ಟಾರಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಜನಾರ್ದನ ಕುಲಾಲ್, ವಿವೇಕಾನಂದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಂಡಾಲ ವಿನೋದ್ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕಿ ರೇಖಾ ಸಿ ಎಚ್ ಹಾಗೂ ಶಿಕ್ಷಕಿಯರನ್ನು, ಅಡುಗೆ ಸಿಬ್ಬಂದಿಗಳನ್ನು, ನೃತ್ಯ ಶಿಕ್ಷಕ ಶ್ರೀಕಾಂತ್ ಕೊಂಡಣ, ಶಾಲೆಯಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸಿದ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಬಂಟ್ವಾಳ ಪುರಸಭೆ ಅಧ್ಯಕ್ಷ ವಾಸು ಪೂಜಾರಿ, ಬಂಟ್ವಾಳ ಸಮೂಹ ಸಂಪನ್ಮೂಲ ಕೇಂದ್ರ ಸಮನ್ವಯ ಅಧಿಕಾರಿ ವಿದ್ಯಾಕುಮಾರಿ, ಬಂಟ್ವಾಳ ನಗರ ಕ್ಲಸ್ಟರ್ ಸಿ ಆರ್ ಪಿ ಸುಧಾಕರ್, ಪುರಸಭೆ ಸದಸ್ಯ ಜಯರಾಮ ಗುಂಡೂರ್,ಸತೀಶ್ ಶೆಟ್ಟಿ ಬೊಂಡಾಲ, ಶಾಲಾ ನಾಯಕ ಹರಿಪ್ರಸಾದ್, ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರುಗಳು, ಶಾಲಾ ಮಕ್ಕಳ ಪೋಷಕರು, ಹಿರಿಯ ವಿದ್ಯಾರ್ಥಿಗಳು, ಶಾಲಾ ವಿದ್ಯಾಭಿಮಾನಿಗಳು, ಸಂಘ ಸಂಸ್ಥೆಯ ಸದಸ್ಯರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಭಾ ಕಾರ್ಯಕ್ರಮದ ಮೊದಲು ಶಾಲಾ ಮಕ್ಕಳಿಂದ ತುಳುನಾಡ ವೈಭವ ನೃತ್ಯ ರೂಪಕ ಪ್ರದರ್ಶಿಸಲ್ಪಟ್ಟಿತು.
ಮಕ್ಕಳು ನಾಡಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭಿಸಿ, ಶಾಲಾ ಮುಖ್ಯ ಶಿಕ್ಷಕಿ ರೇಖಾ ಸಿ ಎಚ್ ಸ್ವಾಗತಿಸಿ, ಶಿಕ್ಷಕಿ ಭವ್ಯ ವಂದಿಸಿದರು. ಶಿಕ್ಷಕಿ ಲಾವಣ್ಯ ಹಾಗೂ ಸೌಮ್ಯ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು ಶಿಕ್ಷಕಿರಾದ ಕಿಶೋರಿ ಹಾಗೂ ಭವ್ಯಮಾತಾಜಿ ಸಹಕರಿಸಿದರು