ಕೋಲಾರ: ಕಾಸರಗೋಡಿನ ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯ ಮತ್ತು ಕೋಲಾರದ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘದ ಜಂಟಿ ಆಶ್ರಯದಲ್ಲಿ ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನ-2025 ಕಾರ್ಯಕ್ರಮವು ಜು.19ರಂದು ಬೆಳಗ್ಗೆ 8.30ರಿಂದ ಕೋಲಾರ ಪತ್ರಿಕಾ ಭವನದಲ್ಲಿ ನಡೆಯಲಿದೆ. ಸಮಾವೇಶದಲ್ಲಿ ಧ್ವಜಾರೋಹಣ, ಮೆರವಣಿಗೆ, ಪುಸ್ತಕ ಮಳಿಗೆ, ಕೃತಿ ಬಿಡುಗಡೆ, ಕವಿಗೋಷ್ಠಿ, ವಿಚಾರಗೋಷ್ಥಿ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭಗಳು ನಡೆಯಲಿದೆ. ಈ ಸಮ್ಮೇಳನದಲ್ಲಿ ಕಾಸರಗೋಡು ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.