ಗಡಿನಾಡು ಕನ್ನಡ ಸಮ್ಮೇಳನ–2026 : ಸರ್ವಾಧ್ಯಕ್ಷರಾಗಿ ಡಾ. ಸಿ. ಸೋಮಶೇಖರ್ ಐಎಎಸ್ ಆಯ್ಕೆ

0
4

ಕಾಸರಗೋಡು : ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯದ ರಜತ ಸಂಭ್ರಮ ಸಮಾರೋಪದ ಅಂಗವಾಗಿ ಜುಲೈ 26, 2026 (ಭಾನುವಾರ) ನಡೆಯಲಿರುವ **’ಕರ್ನಾಟಕ–ಗಡಿನಾಡು ಕನ್ನಡ ಸಮ್ಮೇಳನ–2026’**ಕ್ಕೆ ಸರ್ವಾಧ್ಯಕ್ಷರಾಗಿ ಮಾಜಿ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರು ಹಾಗೂ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನಾಕಾಂಕ್ಷಿ ಡಾ. ಸಿ. ಸೋಮಶೇಖರ್, ಐಎಎಸ್ ಅವರನ್ನು ಆಯ್ಕೆ ಮಾಡಲಾಗಿದೆ.

ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಅವರ ಸಾರಥ್ಯದಲ್ಲಿ ಕನ್ನಡ ಭವನದ ಡಾ. ಲಲಿತಾ ಎಸ್.ಎನ್. ಭಟ್ ವೇದಿಕೆಯಲ್ಲಿ ಸಮ್ಮೇಳನವು ವೈಭವದಿಂದ ನಡೆಯಲಿದ್ದು, ಕರ್ನಾಟಕದ ವಿವಿಧ ಭಾಗಗಳಿಂದ ಕನ್ನಡ ಸಂಘಟನೆಗಳ ಪ್ರತಿನಿಧಿಗಳು, ಸಾಹಿತ್ಯಾಸಕ್ತರು, ಕಲಾವಿದರು ಹಾಗೂ ಕನ್ನಡ ಮುಖಂಡರು ಭಾಗವಹಿಸಲಿದ್ದಾರೆ.

ಸಮ್ಮೇಳನದಲ್ಲಿ ಸುಮಾರು 50 ವಿವಿಧ ಕನ್ನಡ ಸಂಘಟನೆಗಳ ರೂವಾರಿಗಳಿಗೆ ಹಾಗೂ 50 ಮಂದಿ ಕನ್ನಡ ಸಾಹಿತಿಗಳು, ಕವಿಗಳು ಮತ್ತು ವಿದ್ವಾಂಸರಿಗೆ ಪ್ರಶಸ್ತಿ ಪ್ರದಾನ ಮಾಡುವ ಮೂಲಕ ಗಡಿನಾಡು ಕನ್ನಡ ಸೇವೆಯನ್ನು ಗೌರವಿಸಲಾಗುತ್ತದೆ. ಅಲ್ಲದೆ ಕರ್ನಾಟಕದ ವಿವಿಧ ಸಾಂಸ್ಕೃತಿಕ ಕಲಾಪ್ರಕಾರಗಳ ಪ್ರದರ್ಶನ, ಕನ್ನಡ ಮೆರವಣಿಗೆ ಹಾಗೂ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪಕ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಯನ್ನು ಕನ್ನಡ ಭವನದ ವತಿಯಿಂದ ಡಾ. ಸಿ. ಸೋಮಶೇಖರ್ ಅವರಿಗೆ ಪ್ರದಾನಿಸಿ ಗೌರವಿಸಲಾಗುವುದು.

ಸಮ್ಮೇಳನದಲ್ಲಿ ಸಚ್ಚಿದಾನಂದ ಶ್ರೀ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿ ಹಾಗೂ ಆಶೀರ್ವಚನ ಇರಲಿದೆ.

ಈ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here