ಬೆಂಗಳೂರು, ಜೂ.18: ಆಟವಾಡುತ್ತಿದ್ದ ವೇಳೆ ಕಾಂಪೌಂಡ್ ಗೋಡೆ ಹಾಗೂ ಕಬ್ಬಿಣದ ಗೇಟ್ ಏಕಾಏಕಿ ಕುಸಿದು ಬಿದ್ದ ಪರಿಣಾಮ 5 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದು, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಬಾಲಕನನ್ನು ಯಾದಗಿರಿ ಮೂಲದ ದಾವಲ್ ಸಾಬ್ ಅವರ ಪುತ್ರ ಅಫೀನ್ (5) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕ್ಯಾಬ್ ಚಾಲಕರಾಗಿರುವ ದಾವಲ್ ಸಾಬ್ ಅವರು ಬೆಂಗಳೂರಿನಲ್ಲಿ ಉದ್ಯೋಗದ ಹುಡುಕಾಟದಲ್ಲಿದ್ದು, ಅವರ ಪತ್ನಿ ಹಾಗೂ ಪುತ್ರ ಅಫೀನ್ ಕೇವಲ ಐದು ದಿನಗಳ ಹಿಂದಷ್ಟೇ ಬಾಗಲೂರು ವ್ಯಾಪ್ತಿಯ ಬಂಡಿಕೊಡಿಗೇಹಳ್ಳಿಯಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು.
ಬುಧವಾರ ಸಂಜೆ ಸುಮಾರು 6.30ರ ವೇಳೆಗೆ ಅಫೀನ್, ಪಕ್ಕದ ಮನೆಯ ಮಕ್ಕಳಾದ ಸಮನ್ವಿ ಹಾಗೂ ಇನ್ನೊಬ್ಬ ಮಗುವಿನೊಂದಿಗೆ ಬಿ.ಸಿ. ನರಸಪ್ಪ ಎಂಬುವರ ಮನೆಯ ಕಾಂಪೌಂಡ್ ಗೇಟ್ ಬಳಿ ಆಟವಾಡುತ್ತಿದ್ದನು. ಆಟದ ವೇಳೆ ಮಕ್ಕಳು ಕಬ್ಬಿಣದ ಗೇಟ್ ಹಿಡಿದು ಜೀಕಾಡುತ್ತಿದ್ದಾಗ, ಗೇಟ್‌ನ ಭಾರವನ್ನು ತಡೆಯಲಾರದೆ ಕಾಂಪೌಂಡ್ ಗೋಡೆ ಗೇಟ್ ಸಮೇತ ಏಕಾಏಕಿ ಮಕ್ಕಳ ಮೇಲೆ ಕುಸಿದು ಬಿದ್ದಿದೆ.
ಘಟನೆಯಿಂದ ಬೆಚ್ಚಿಬಿದ್ದ ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಅವಶೇಷಗಳಡಿ ಸಿಲುಕಿದ್ದ ಮಕ್ಕಳನ್ನು ರಕ್ಷಿಸಿ ಸಮೀಪದ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ತಲೆ ಮತ್ತು ಎದೆ ಭಾಗಕ್ಕೆ ತೀವ್ರ ಪೆಟ್ಟಾಗಿದ್ದ ಅಫೀನ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಗಂಭೀರವಾಗಿ ಗಾಯಗೊಂಡಿರುವ ಸಮನ್ವಿ ಎಂಬ ಮಗುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ವೈದ್ಯರು ನಿಗಾ ವಹಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಬಾಗಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಂಪೌಂಡ್ ಗೋಡೆಯ ನಿರ್ಮಾಣದಲ್ಲಿ ನಿರ್ಲಕ್ಷ್ಯ ಅಥವಾ ಅವೈಜ್ಞಾನಿಕ ಕಾಮಗಾರಿ ನಡೆದಿದೆಯೇ ಎಂಬ ಬಗ್ಗೆ ತನಿಖೆ ಆರಂಭಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರು : ಆಟವಾಡುತ್ತಿದ್ದ ವೇಳೆ ಕಾಂಪೌಂಡ್ ಗೋಡೆ ಹಾಗೂ ಕಬ್ಬಿಣದ ಗೇಟ್ ಏಕಾಏಕಿ ಕುಸಿದು ಬಿದ್ದ ಪರಿಣಾಮ 5 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದು, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.