Monday, January 20, 2025
Homeಬೆಳ್ತಂಗಡಿಜ.8ರಿಂದ 20ರವರೆಗೆ ಅಳದಂಗಡಿ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ಜಾತ್ರಾ ಮಹೋತ್ಸವ

ಜ.8ರಿಂದ 20ರವರೆಗೆ ಅಳದಂಗಡಿ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ಜಾತ್ರಾ ಮಹೋತ್ಸವ

ಬೆಳ್ತಂಗಡಿ: ಅಳದಂಗಡಿ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರಾ ಮಹೋತ್ಸವವು ಜ. 8 ರಿಂದ 20ರವರೆಗೆ ಸೀಮೆಯ ತಂತ್ರಿಗಳಾದ ನಡ್ಡತಾಡಿ ಬ್ರಹ್ಮಶ್ರೀ ವೇ. ಮೂ. ಶ್ರೀಪಾದ ಪಾಂಗಣ್ಣಾಯರ ನೇತೃತ್ವದಲ್ಲಿ ನಡೆಯಲಿದೆ ಎಂದು ಆನುವಂಶಿಕ ಆಡಳಿತ ಮೋಕ್ತಸರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರೂ ಆಗಿರುವ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಮತ್ತು ಕಾರ್ಯಾಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸಕ್ತ ದೇವಳದಲ್ಲಿ ನಡೆದ ಪ್ರಶ್ನಾಚಿಂತನೆಯಲ್ಲಿ ಕಂಡುಬಂದಂತೆ 18 ವರ್ಷಗಳ ಬಳಿಕ ಮತ್ತೆ ಬ್ರಹ್ಮಕಲಶೋತ್ಸವ ನಡೆಯುತ್ತಿದೆ. ಅದರಂತೆ, ಕ್ಷೇತ್ರದಲ್ಲಿ ಅನೇಕ ಜೀರ್ಣೋದ್ಧಾರ ಕಾರ್ಯಗಳನ್ನು ಕೈಗೊಳ್ಳುವ ಕುರಿತು ಚಿಂತಿಸಲಾಗಿದೆ. ದೇವಳದ ಪ್ರಾಂಗಣ, ಒಳಾಂಗಣದ ನವೀಕರಣ, ಸುತ್ತ ಪ್ರಾಂಗಣದಲ್ಲಿ ಇಂಟರ್ ಲಾಕ್ ಅಳವಡಿಕೆ, ಪಾಕಶಾಲೆ ನಿರ್ಮಾಣ ಹಾಗೂ ಋತ್ವಿಜರ ಭೋಜನ ಶಾಲೆ, ರಜತ ಪಲ್ಲಕ್ಕಿ ಸಮರ್ಪಣೆ, ಬ್ರಹ್ಮಕಲಶೋತ್ಸವ ಸೇರಿದಂತೆ ಸುಮಾರು 1.50 ಕೋಟಿ ರೂ. ವೆಚ್ಚದಲ್ಲಿ ಸೀಮೆಯ ಭಕ್ತರ ಸಹಕಾರದಿಂದ ಈ ಧರ್ಮಕಾರ್ಯ ನಡೆಯಲಿದೆ.

ಬ್ರಹ್ಮಕಲಶೋತ್ಸವ ಮತ್ತು ಉಪ ಸಮಿತಿ ರಚಿಸಲಾಗಿದ್ದು 32 ಗ್ರಾಮಗಳಿಗೆ ಆಮಂತ್ರಣ ಬಟಾವಾಡೆ ಕಾರ್ಯ ನಡೆಯುತ್ತಿದೆ. ಈ ಬಾರಿ ಬ್ರಹ್ಮಕಲಶೋತ್ಸವದಲ್ಲಿ ದೇವತಾ ಕಾರ್ಯಕ್ರಮ ಮತ್ತು ಅನ್ನ ಸಂತರ್ಪಣೆ ಕಾರ್ಯಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಜನವರಿ 2ರಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಹರೀಶ್ ಕುಮಾರ್ ಚಪ್ಪರ ಮುಹೂರ್ತ ನೆರವೇರಿಸಿದ್ದಾರೆ.

ಜನವರಿ 8ರಂದು ಅಳದಂಗಡಿ ಬಸ್ ನಿಲ್ದಾಣದಿಂದ ಭವ್ಯ ಹೊರೆಕಾಣಿಕೆ ಮೆರವಣಿಗೆ ನಡೆಯಲಿದ್ದು, ಇದನ್ನು ಮಾಣಿಲ ಶ್ರೀಧಾಮದ ಮೋಹನದಾಸ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ತಾಲೂಕಿನ ವಿವಿಧ ಕುಣಿತ ಭಜನಾ ತಂಡಗಳ ಕುಣಿತ ಭಜನೆ ಮೆರವಣಿಗೆಗೆ ಮೆರುಗು ತುಂಬಲಿದೆ.

ಉಗ್ರಾಣ ಮುಹೂರ್ತವನ್ನು ಡಿ. ಹರ್ಷೇಂದ್ರ ಕುಮಾರ್ ನೆರವೇರಿಸಲಿದ್ದಾರೆ. ಜ. 9ರಂದು ರಾತ್ರಿ ಕಲ್ಲಡ್ಕ ವಿಠಲ ನಾಯಕ್ ಬಳಗದಿಂದ ಗೀತ ಸಾಹಿತ್ಯ ಸಂಭ್ರಮ ನಡೆಯಲಿದೆ. ಜ. 10ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ. ಭಾಗವಹಿಸಲಿದ್ದಾರೆ. ಜ. 12ರಂದು ಬ್ರಹ್ಮ ಕುಂಭಾಭಿಷೇಕ ಜರಗಲಿದೆ. ರಾತ್ರಿ ಕಟೀಲು ಮೇಳದ ಕಲಾವಿದರಿಂದ ಶ್ರೀ ದೇವಿ ಮಹಾತ್ಮ ಯಕ್ಷಗಾನ ಬಯಲಾಟ ಜರಗಲಿದೆ. ಬಳಿಕ ಜ. 14ರಿಂದ 20ರವರೆಗೆ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಂಟು ಶತಮಾನಗಳ ಇತಿಹಾಸ

ಅಜಿಲ ವಂಶಿಸ್ತರು 12 ಮಾಗಣೆಗೆ 32 ಗ್ರಾಮಗಳನ್ನು ಒಳಗೊಂಡು ಅಳದಂಗಡಿ ಸೋಮನಾಥೇಶ್ವರಿ, ವೇಣೂರು ಮಹಾಲಿಂಗೇಶ್ವರ, ಕೇಳ ಪಂಚಲಿಂಗೇಶ್ವರ, ಬರಯಾ ಗೋಪಾಲಕೃಷ್ಣ ಎಂಬ 4 ಕಡೆಗಳಲ್ಲಿ ದೇವಾಲಯಗಳನ್ನು ಸ್ಥಾಪನೆ ಮಾಡಿದ್ದು, ಆಳದಂಗಡಿಯ ಈ ದೇವಾಲಯವು ಅಜಿಲ ಸೀಮೆಗೆ ಸಂಬಂಧಪಟ್ಟ ದೇವಾಲಯವಾಗಿರುತ್ತದೆ. 1186ರಲ್ಲಿ ಮದುರಕ್ಕೆ ದೇವಿ ಪ್ರಾರಂಭ ಮಾಡಿದ ಇತಿಹಾಸ ಇರುವ ಈ ದೇವಾಲಯದಲ್ಲಿ. 2007ರಲ್ಲಿ ಸೀಮೆಯ ಭಕ್ತರ ಸಹಕಾರದೊಂದಿಗೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಗೌರವಾಧ್ಯಕ್ಷತೆಯಲ್ಲಿ ಬ್ರಹ್ಮಕಲಶೋತ್ಸವ ನೆರವೇರಿತ್ತು.

RELATED ARTICLES
- Advertisment -
Google search engine

Most Popular