Monday, May 19, 2025
Homeಧಾರ್ಮಿಕಮಂಡೆಕೋಲು ಶ್ರೀ ದೇವಳದ ಬ್ರಹ್ಮಕಲಶೋತ್ಸವ: ಸಮಿತಿ ರಚನೆ

ಮಂಡೆಕೋಲು ಶ್ರೀ ದೇವಳದ ಬ್ರಹ್ಮಕಲಶೋತ್ಸವ: ಸಮಿತಿ ರಚನೆ

ಸುಳ್ಯ: ಮಂಡೆಕೋಲು ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಿದ್ಧತೆ ನಡೆಯುತ್ತಿದ್ದು, ಭಾನುವಾರ ನಡೆದ ಸಭೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಮಾಜಿ ಮುಖ್ಯ ಮಂತ್ರಿ, ಸಂಸದ ಡಿ.ವಿ. ಸದಾನಂದ ಗೌಡ ಹಾಗೂ ವೇದಮೂರ್ತಿ ಬ್ರಹ್ಮಶ್ರೀ ರವೀಶ ತಂತ್ರಿ ಅವರನ್ನು ಆಯ್ಕೆ ಮಾಡಲಾಯಿತು.

ಸಮಿತಿಯ ಅಧ್ಯಕ್ಷರಾಗಿ ಶಿವಪ್ರಸಾದ್ ಉಗ್ರಾಣಿಮನೆ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಕಣೆಮರಡ್ಕ ಆಯ್ಕೆಯಾದರು.

ಸಭೆಯ ವೇದಿಕೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಪುಂಡರೀಕ ಹೆಬ್ಬಾರ್, ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಮಣಿಯಾಣಿ ಕೇನಾಜೆ, ಮಹಿಳಾ ಅಧ್ಯಕ್ಷೆ ಮೋಹಿನಿ, ಕಣೆಮ ರಡ್ಕ ವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪೂರ್ಣಚಂದ್ರ ಕಣೆಮರಡ್ಕ ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಉದ್ದಂತಡ್ಕ ಮೊದಲಾದವರು ಉಪಸ್ಥಿತರಿದ್ದರು.

ದೇವಳದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ ಸ್ವಾಗತಿಸಿ, ಬ್ರಹ್ಮಕಲಶ ಸಮಿತಿ ಪ್ರಧಾನ ಕಾರ್ಯದರ್ಶಿ ಸುರೇಶ್ ಕಣೆಮರಡ್ಕ ವಂದಿಸಿ, ಶಿವಪ್ರಸಾದ್ ಉಗ್ರಾಣಿಮನೆ ಕಾರ್ಯಕ್ರಮ ನಿರೂಪಿಸಿದರು.

ಬ್ರಹ್ಮಕಲಶ : ಶ್ರೀ ಮಹಾ ವಿಷ್ಣುಮೂರ್ತಿ ದೇವಳ ಬ್ರಹ್ಮಕಲಶ ಏಪ್ರಿಲ್ ಕೊನೆಗೆ ಆರಂಭಗೊಂಡು ಮೇ 4ರವರೆಗೆ ನಡೆಯಲಿದೆ.

RELATED ARTICLES
- Advertisment -
Google search engine

Most Popular