ಮುಲ್ಕಿ: ಕಾರ್ನಾಡ್ ಶ್ರೀ ಹರಿಹರ ಕ್ಷೇತ್ರದ ಬ್ರಹ್ಮಕಲಶೋತ್ಸವದ 2025ರ ಫೆಬ್ರವರಿ 12 ರಿಂದ 17ರವರೆಗೆ ನಡೆಯಲಿದ್ದು ಪೂರ್ವಭಾವಿಯಾಗಿ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ಮನವಿ ಪತ್ರ ಬಿಡುಗಡೆ ಸಮಾರಂಭ ಕ್ಷೇತ್ರದಲ್ಲಿ ನಡೆಯಿತು.
ಕ್ಷೇತ್ರದ ಅರ್ಚಕ ಹಯಗ್ರೀವ ಪಡ್ಡಿಲ್ಲಾಯ ಹಾಗೂ ರಾಜಾರಾಮ ಭಟ್ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಶಾಸಕ ಉಮಾನಾಥ ಕೋಟ್ಯಾನ್ ಮನವಿ ಪತ್ರ ಬಿಡುಗಡೆ ಮಾಡಿ ಮಾತನಾಡಿ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯಿಂದ ಗ್ರಾಮದ ಅಭಿವೃದ್ಧಿ ಸಾಧ್ಯ ಎಂದರು.
ಈ ಸಂದರ್ಭ ಕ್ಷೇತ್ರದ ಆಡಳಿತ ಮೊಕ್ತೇಸರ ಎಮ್ ಎಚ್ ಅರವಿಂದ ಪೂಂಜಾ, ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್, ಸದಸ್ಯ ಹರ್ಷರಾಜ ಶೆಟ್ಟಿ, ಸುಭಾಷ್ ಶೆಟ್ಟಿ,ಬಪ್ಪನಾಡು ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಸುನಿಲ್ ಆಳ್ವ, ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಅತುಲ್ ಕುಡ್ವ,ಉದ್ಯಮಿ ಜೀವನ್ ಶೆಟ್ಟಿ ಪಾಂಡು ಎ ಕಾರ್ನಾಡ್, ಕಾರ್ನಾಡ್, ಸುರೇಶ್ ರಾವ್, ರಂಗನಾಥ ಶೆಟ್ಟಿ ಪ್ರವೀಣ್ ಕೋಟ್ಯಾನ್, ಕೃಷ್ಣ ಶೆಟ್ಟಿ, ಉದಯಕುಮಾರ್ ಶೆಟ್ಟಿ ಕಾರ್ನಾಡ್ ಬೈಪಾಸ್, ರಮೇಶ್ ಅಮೀನ್ ಕೊಕ್ಕರಕಲ್ , ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಲ್ಕಿ ವಲಯದ ಮೇಲ್ವಿಚಾರಕಿ ನಿಶ್ಮಿತಾ ಶೆಟ್ಟಿ
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ರವಿಕುಮಾರ್ ಭಟ್, ಶಶೀoದ್ರ ಸಾಲ್ಯಾನ್, ರಾಘವೇಂದ್ರ ಟಿ, ನೂತನ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.