ಪರಾರಿ ಬೊಬ್ಬರ್ಯ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಂಪನ್ನ

0
48

ಬ್ರಹ್ಮಾವರ : ಪರಾರಿ ಶ್ರೀ ಬೊಬ್ಬರ್ಯ ದೈವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವ ಮತ್ತು ಧಾರ್ಮಿಕ ಸಮಾರಂಭಗಳು ಅತ್ಯಂತ ವೈಭವದಿಂದ ನೆರವೇರಿದವು. ಸಾವಿರಾರು ಭಕ್ತರು ಭಾಗವಹಿಸಿ ದೈವದ ಕೋಲ ಸೇವೆ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡರು.

ಉತ್ಸವದ ಅಂಗವಾಗಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುರುರಾಜ್ ಭಟ್ ಕೊಳಲಗಿರಿ ಹಾಗೂ ಪ್ರಧಾನ ಅರ್ಚಕ ಲಕ್ಷ್ಮೀಶ್ ಭಟ್ ಅವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ದೈವಸ್ಥಾನದ ಅಭಿವೃದ್ಧಿಗೆ ಸಹಕರಿಸಿದ ಗಣ್ಯರಾದ ಸದಾಶಿವ ಪ್ರಭು (ಐಎಸ್‌ಐ, ವಿಜ್ಞಾನ ಮತ್ತು ತಂತ್ರಜ್ಞಾನ ನಿರ್ದೇಶಕ, ಬೆಂಗಳೂರು) ಅವರನ್ನು ಕೂಡ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಶಾಸಕರಾದ ಯಶ್ ಪಾಲ್ ಸುವರ್ಣ ಅವರು ಭೇಟಿ ನೀಡಿ, ಬ್ರಹ್ಮಕಲಶ ಹಾಗೂ ಜೀರ್ಣೋದ್ಧಾರ ಕಾರ್ಯಗಳಿಗೆ ಸಹಕಾರ ನೀಡಿರುವುದಾಗಿ ತಿಳಿಸಿ, ಮುಂದಿನ ದಿನಗಳಲ್ಲಿ ಅನುದಾನ ಒದಗಿಸುವ ಭರವಸೆ ನೀಡಿದರು. ಧಾರ್ಮಿಕ ಸಭೆಯನ್ನು ಪ್ರಸಾದ್ ರಾಜ್ ಕಾಂಚನ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಸಮಾಜಸೇವಕರು ಹಾಗೂ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ದಾನಿಗಳು, ಸ್ಥಳದಾನಿಗಳು, ಸಮಿತಿ ಸದಸ್ಯರು, ಪತ್ರಕರ್ತರು ಮತ್ತು ಸೇವೆ ಸಲ್ಲಿಸಿದವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಐದು ದಿನಗಳ ಕಾಲ ನಡೆದ ಉತ್ಸವದಲ್ಲಿ ಅನ್ನಸಂತರ್ಪಣೆ ಏರ್ಪಡಿಸಲಾಗಿದ್ದು, ಸಾವಿರಾರು ಭಕ್ತರು ಪ್ರಸಾದ ಸ್ವೀಕರಿಸಿದರು. ದೈವದ ಕೋಲ ಸೇವೆ ಭಕ್ತರ ಮನಸೆಳೆಯಿತು.

ಜೀರ್ಣೋದ್ಧಾರ ಸಮಿತಿಯ ವತಿಯಿಂದ ಊರ ಪರ ಊರಿನ ದಾನಿಗಳು, ಭಕ್ತರು, ಸಂಘ-ಸಂಸ್ಥೆಗಳು, ಭಜನಾ ಮಂಡಳಿಗಳು, ವಾಹನ ಮಾಲಕರು ಹಾಗೂ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here