ಉಡುಪಿ: ಒಂದೂವರೆ ವರ್ಷದ ಮಗುವಿನೊಂದಿಗೆ ನೇಣುಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾಹಕ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಹೆರಂಜೆಯಲ್ಲಿ ಸೋಮವಾರ ಬೆಳಕಿಗೆ ಬಂದಿದೆ.
ಮೃತರನ್ನು ಸುಪ್ರಿತಾ (23) ಹಾಗೂ ಮಗು ಶ್ರೇಷ್ಠ (1.6) ಎಂದು ಗುರುತಿಸಲಾಗಿದೆ. ಬ್ರಹ್ಮಾವರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಘಟನೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

