ಬ್ರಹ್ಮಾವರ: ಶಾಲಾ ಬಸ್ ಗೆ ಲಾರಿ ಡಿಕ್ಕಿ- ಹಲವು ವಿದ್ಯಾರ್ಥಿಗಳಿಗೆ ಗಾಯ

0
435
Oplus_131072

ಉಡುಪಿ: ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡ ಘಟನೆ ಬುಧವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ತಾಲೂಕಿನ ಧರ್ಮವರ ಆಡಿಟೋರಿಯಂ ಬಳಿ ಸಂಭವಿಸಿದೆ.

ಜಿ.ಎಂ ವಿದ್ಯಾನಿಕೇತನ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಕುಂದಾಪುರದಿಂದ ಬಂದು ಧರ್ಮಾವರ ಆಡಿಟೋರಿಯಂ ಸರ್ಕಲ್ ಬಳಿ ಯೂ ಟರ್ನ್ ಮಾಡುವ ಸಂದರ್ಭದಲ್ಲಿ ಹಿಂದಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ.ಅಪಘಾತದಿಂದ ಹಲವು ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಅಪಘಾತಕ್ಕೆ ಶಾಲಾ ಬಸ್ ಚಾಲಕನ ನಿರ್ಲಕ್ಷವೇ ಕಾರಣ ಎಂದು ತಿಳಿದುಬಂದಿದೆ. ಬ್ರಹ್ಮಾವರ ಠಾಣೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here