ಸುಳ್ಯದಲ್ಲಿ ಅತಿ ಹಿಂದುಳಿದ ಸಮುದಾಯದ ಅಭಿವೃದ್ಧಿ ಕುರಿತು ಚಿಂತನ ಮಂಥನ ಸಭೆ

0
11

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ತಾಲೂಕು ಪಂಚಾಯಿತಿ ಕಟ್ಟಡದಲ್ಲಿರುವ AVSS ಕಚೇರಿಯ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಅಭಿವೃದ್ಧಿ ಕುರಿತು ಪೂರ್ವಭಾವಿ ಚಿಂತನ ಮಂಥನ ಸಭೆಯನ್ನು ಆಯೋಜಿಸಲಾಯಿತು.

ಅತಿ ಹಿಂದುಳಿದ ಸಮುದಾಯದ ಅಭಿವೃದ್ಧಿ, ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳು, ಶಿಕ್ಷಣ, ಉದ್ಯೋಗ, ಆರ್ಥಿಕ ಸಬಲೀಕರಣ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಯೋಜನೆಗಳ ಕುರಿತು ಚರ್ಚಿಸಲಾಯಿತು.

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಭಾಗೀರಥಿ ಮುರುಳ್ಯ ಅವರು ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಲಿಕೆ ಸಮುದಾಯದ ಹಿರಿಯರಾದ ಬಾಬು ಅಜಿಲ ಅವರು ದೀಪ ಬೆಳಗಿಸುವ ಮೂಲಕ ಚಿಂತನ ಮಂಥನ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು AVSS ಸುಳ್ಯ ಇದರ ಅಧ್ಯಕ್ಷರಾದ ಕರುಣಾಕರ ಪಲ್ಲತಡ್ಕ ಅವರು ವಹಿಸಿದ್ದರು.

ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೋಹನಂಗಯ್ಯ ಸ್ವಾಮಿ, ಅಧ್ಯಕ್ಷರು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್, ಮಂಗಳೂರು, ಯುವರಾಜ್ ಎಂ. ಕೆ., ಅಧ್ಯಕ್ಷರು, ರಾಜೇಶ್ ವೈ., ಉಪಾಧ್ಯಕ್ಷರು, ಎಂ ಆರ್ ಪಿ ಎಲ್, ಕಾರ್ಯಕ್ರಮದಲ್ಲಿ ಗಣ್ಯರು, ಮುಖಂಡರು ಹಾಗೂ ಸಮುದಾಯದ ಪ್ರತಿನಿಧಿಗಳು ಭಾಗವಹಿಸಿದ್ದರು.

ಇವರೊಂದಿಗೆ ಸುಳ್ಯ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿವಿಧ ಸಂಘಟನೆಗಳ ಮುಖಂಡರು, ಬಂಧುಗಳು ಉಪಸ್ಥಿತರಿದ್ದರು.
ಪ್ರಕಾಶ್ ಪಿ. ಎಸ್. ಪಾತೆಟ್ಟಿ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.

ಈ ಚಿಂತನ ಮಂಥನ ಸಭೆಯು ಸುಳ್ಯ ತಾಲೂಕಿನ SC/ST ಸಮುದಾಯದ ಸಮಸ್ಯೆಗಳನ್ನು ಗುರುತಿಸುವುದು, ಅಭಿವೃದ್ಧಿಯ ಅಗತ್ಯತೆಗಳನ್ನು ಚರ್ಚಿಸುವುದು.
ಸಮುದಾಯದ ಅಭಿವೃದ್ಧಿಗಾಗಿ ಶಿಕ್ಷಣ, ಉದ್ಯೋಗ, ಸ್ವಯಂ ಉದ್ಯೋಗ, ಆರ್ಥಿಕ ಸಬಲೀಕರಣ, ಸರ್ಕಾರಿ ಯೋಜನೆಗಳ ಸಮರ್ಪಕ ಬಳಕೆ ಮತ್ತು ಸಾಮಾಜಿಕ ನ್ಯಾಯದಂತಹ ಕ್ಷೇತ್ರಗಳಿಗೆ ಹೆಚ್ಚಿನ ಗಮನ ನೀಡುವ ಅಗತ್ಯವಿದೆ.

ಸಮುದಾಯದ ಅಭಿವೃದ್ಧಿ; ಸಮಾನ ಅವಕಾಶ, ಸಾಮಾಜಿಕ ನ್ಯಾಯ, ಸಹಬಾಳ್ವೆ ಮತ್ತು ಪರಸ್ಪರ ಗೌರವದ ಮೂಲಕ ಸಮ ಸಮಾಜವನ್ನು ನಿರ್ಮಿಸುವುದಾಗಿದೆ. ಸಮುದಾಯದ ಹಕ್ಕುಗಳ ರಕ್ಷಣೆ, ಅಭಿವೃದ್ಧಿಯ ಅವಕಾಶಗಳ ಸೃಷ್ಟಿ ಮತ್ತು ಮುಂದಿನ ಪೀಳಿಗೆಯ ಉಜ್ವಲ ಭವಿಷ್ಯಕ್ಕಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸೋಣ.
ಒಗ್ಗಟ್ಟೇ ನಮ್ಮ ಶಕ್ತಿ – ಅಭಿವೃದ್ಧಿಯೇ ನಮ್ಮ ಗುರಿ – ಸಮ ಸಮಾಜವೇ ನಮ್ಮ ಸಂಕಲ್ಪ.