40,000 ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಹಾಯಕ ಡ್ರಗ್ಸ್ ಕಂಟ್ರೋಲರ್ ಅಧಿಕಾರಿ ಅಜಯ್ ಡಿ.ಶಾ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೊನ್ನೇಲ್ ಮೆಡಿಕಲ್ ಶಾಪ್ ಲೈಸೆನ್ಸ್ ಗೆ ಸುಬ್ರಮಣ್ಯ ಎನ್ನುವವರು ಅರ್ಜಿ ಹಾಕಿದ್ದರು. ಮೆಡಿಕಲ್ ಶಾಪ್ ಗೆ ಲೈಸೆನ್ಸ್ ನೀಡಲು ಲಂಚಕ್ಕೆ ಅಜಯ್ ಡಿಮ್ಯಾಂಡ್ ಮಾಡಿದ್ದರು.ಸುಬ್ರಮಣ್ಯ ಬಳಿ ಕಾರಿನಲ್ಲಿ 40,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಎಸ್ ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಅಧಿಕಾರಿ ಅಜಯ್ ರಾಜ್ ಡಿ.ಶಾನನ್ನು ಇದೀಗ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.