ಪ್ರಸ್ತುತ ಕಾಲದಲ್ಲಿ ಡಿಪ್ಲೋಮಾ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಬೇಡಿಕೆ ಇದ್ದು ವಿದ್ಯಾರ್ಥಿಗಳಿಗೆ ಔದ್ಯೋಗಿಕವಾಗಿ ಉತ್ತಮ ಅವಕಾಶಗಳು ದೊರೆಯುತ್ತಿದೆ ಎಂದು ಎಸ್. ಎನ್. ಮೂಡಬಿದ್ರಿ ಪಾಲಿಟೆಕ್ನಿಕ್ ನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ನುಡಿದರು. ಅವರು ಎಸ್. ಎನ್. ಮೂಡಬಿದ್ರಿ ಪಾಲಿಟೆಕ್ನಿಕ್ ನ ಹೊಸದಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಪ್ರೇರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಂಸ್ಥೆಯ ಪ್ರಾಂಶುಪಾಲರಾದ ನೋರೋನ್ಹ ತರೀನಾ ರೀಟ ಅತಿಥಿಗಳನ್ನು ಸ್ವಾಗತಿಸಿ ವಿದ್ಯಾರ್ಥಿ ಪ್ರೇರಣಾ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು. ಆಡಳಿತ ಮಂಡಳಿಯ ಉಪಾಧ್ಯಕ್ಷ ಎಸ್ ಡಿ ಸಂಪತ್ ಸಾಮ್ರಾಜ್ಯ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು , ಶ್ರೀ ಮಹಾವೀರ ಕಾಲೇಜ್ ಟ್ರಸ್ಟಿನ ಕಾರ್ಯದರ್ಶಿ ಡಾ. ರಾಧಾಕೃಷ್ಣ, ಆಡಳಿತ ಮಂಡಳಿಯ ಸದಸ್ಯರು ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲ ಜೆ ಜೆ ಪಿಂಟೋ, ಹಾಗೂ ಸಂಸ್ಥೆಯ ಎಂಟು ವಿಭಾಗಗಳ ವಿಭಾಗಾಧಿಕಾರಿಗಳು ಉಪಸ್ಥಿತರಿದ್ದರು. ಆಟೋಮೊಬೈಲ್ ವಿಭಾಗದ ಮುಖ್ಯಸ್ಥರಾದ ಆರ್ ಗಣೇಶನ್ ಧನ್ಯವಾದ ಸಮರ್ಪಿಸಿದರು. ಎಲೆಕ್ಟ್ರಾನಿಕ್ಸ್ ವಿಭಾಗದ ಉಪನ್ಯಾಸಕರಾದ ಡಾ. ಗುರುದಾಸ್ ಎಸ್ ಪಿ ಕಾರ್ಯಕ್ರಮ ನಿರೂಪಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ರಾಮಪ್ರಸಾದ್ ಎಂ, ಗೋಪಾಲಕೃಷ್ಣ ಕೆ ಎಸ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಸುರೇಶ್ ಡಿ ಬಿ ಕಾಲೇಜಿನ ಸಿಬ್ಬಂದಿ ವರ್ಗದವರು ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.