ದೆಹಲಿಯಲ್ಲಿ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರು, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಸಂಸದ ಬ್ರಿಜೇಶ್ ಚೌಟ ಭೇಟಿ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡುವಂತೆ ಮಾನ್ಯ ಸಚಿವರನ್ನು ಆಹ್ವಾನಿಸಲಾಯಿತು ಹಾಗೂ ಮಂಗಳೂರಿನ KIOCL ಸ್ಥಾವರಕ್ಕೆ ಸಂಬಂಧಿಸಿದ ಸಮಸ್ಯೆಗಳು ಮತ್ತು NMDC ಯೊಂದಿಗೆ ಅದರ ವಿಲೀನದ ಸಾಧ್ಯತೆಗಳ ಕುರಿತು ಚರ್ಚಿಸಲಾಯಿತು..
ಬಂದರಿನ ಸಮೀಪದಲ್ಲಿರುವ ಕಾರಣಕ್ಕೆ KIOCL ನ ಬೆಳವಣಿಗೆಯ ಸಾಮರ್ಥ್ಯವನ್ನು ಪರಿಗಣಿಸಿ, KIOCL ಮಂಗಳೂರು ಸ್ಥಾವರದಲ್ಲಿ ಪೂರ್ಣ ಪ್ರಮಾಣದ ಕಾರ್ಯಚಟುವಟಿಕೆಗಳನ್ನು ಪುನರಾರಂಭಿಸಲು ಆಯ್ಕೆಗಳನ್ನು ಕಂಡುಕೊಳ್ಳುವಂತೆ ವಿನಂತಿಸಿ.
ಉದ್ಯೋಗ ಸೃಷ್ಟಿ ಮತ್ತು ಪ್ರಸ್ತುತ ಉದ್ಯೋಗಿಗಳ ಸುರಕ್ಷತೆಯ ಬಗ್ಗೆ ಕೂಡ ಈ ಸಂದರ್ಭದಲ್ಲಿ ಗಮನಹರಿಸಿದರು.