ಮನೆಮನೆಗೆ ಕಾನೂನು ಅರಿವಿನ ದೀಪ:- ಮಂಗಳೂರಿನಲ್ಲಿ ಪಿ.ಎಲ್.ವಿ.ಗಳ ಪುನಶ್ಚೇತನ ತರಬೇತಿ ಯಶಸ್ವಿ

0
19

ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಔಟ್‌ ಲೌಡ್ಸ್ ಇಂಡಿಯಾ ಮತ್ತು ನ್ಯಾಯ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ತರಬೇತಿ ಪಡೆದ ಪ್ಯಾರಾ ಲೀಗಲ್ ವಾಲಂಟಿಯರ್‌ಗಳಿಗಾಗಿ (PLV) ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮವು ಅತ್ಯಂತ ಅರ್ಥಪೂರ್ಣವಾಗಿ ಜರುಗಿತು.

​ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಬಸವರಾಜ್, ಕಾನೂನು ಸೇವಾ ಸಂಸ್ಥೆಗಳು ಮತ್ತು ಸಾಮಾನ್ಯ ಜನರ ನಡುವೆ ಪಿ.ಎಲ್.ವಿ.ಗಳು ಪ್ರಮುಖ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕಾನೂನುಗಳು ಹಾಗೂ ಸಮಾಜದ ಹೊಸ ಸವಾಲುಗಳ ಕುರಿತು ತಮ್ಮ ಜ್ಞಾನವನ್ನು ನಿರಂತರವಾಗಿ ನವೀಕರಿಸಿಕೊಳ್ಳುವುದು ಅವಶ್ಯ ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಜೈಬುನ್ನಿಸಾ ಅಧ್ಯಕ್ಷತೆ ವಹಿಸಿ ಮಾರ್ಗದರ್ಶನ ನೀಡಿದರು.

​ತರಬೇತಿಯಲ್ಲಿ ನಲ್ಸಾ ಮಾರ್ಗಸೂಚಿಗಳು, ಸಮಾನತೆ ಕಾನೂನುಗಳು, ಹಿರಿಯ ನಾಗರಿಕರ ಕಲ್ಯಾಣ, ಎಸ್‌ಸಿ/ಎಸ್‌ಟಿ ಕಾಯ್ದೆಗಳು, ತೃತೀಯ ಲಿಂಗಿಗಳ ಕಾಯ್ದೆ, ಕಾರ್ಮಿಕ ಕಾನೂನುಗಳು, ಮಹಿಳಾ ದೌರ್ಜನ್ಯ ತಡೆ ಕಾನೂನುಗಳು, ಬಾಲ್ಯವಿವಾಹ ನಿಷೇಧ, ಜೆ.ಜೆ. ಕಾಯ್ದೆ ಮತ್ತು ಪೊಕ್ಸೋ ಕಾಯ್ದೆಯಡಿ ಮಕ್ಕಳ ಸುರಕ್ಷತೆ, ಕ್ರಿಮಿನಲ್ ದೂರು ಪ್ರಕ್ರಿಯೆಗಳು ಹಾಗೂ ನ್ಯಾಯಾಲಯದ ಕಾರ್ಯವಿಧಾನಗಳ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳು ಸಮಗ್ರ ಮಾಹಿತಿ ಮತ್ತು ಮಾರ್ಗದರ್ಶನ ನೀಡಿದರು.

​ಪ್ರಚಲಿತ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಹನೀಷಾ ಕಾರ್ಯಕ್ರಮ ನಿರ್ವಹಿಸಿದರು, ಮಾನಸ ಹೆಗ್ಡೆ ಕಾರ್ಯಕ್ರಮ ಸಂಯೋಜಿತ ಸಂಯೋಜಕರಾಗಿದ್ದರು

ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು ಪ್ಯಾರಾ ಲೀಗಲ್ ವಾಲಂಟಿಯರ್‌ಗಳು ಈ ತರಬೇತಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಯೋಜನ ಪಡೆದರು.

ವರದಿ -ಮಂದಾರ ರಾಜೇಶ್