Wednesday, September 11, 2024
Homeರಾಷ್ಟ್ರೀಯಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್‌ ಭಟ್ಟಾಚಾರ್ಯ ನಿಧನ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್‌ ಭಟ್ಟಾಚಾರ್ಯ ನಿಧನ

ಕೊಲ್ಕತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್‌ ಭಟ್ಟಾಚಾರ್ಯ ಗುರುವಾರ ನಿಧನರಾದರು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಬುದ್ಧದೇವ್‌ ಭಟ್ಟಾಚಾರ್ಯ ತಮ್ಮ ನಿವಾಸದಲ್ಲಿ ಇಂದು ಬೆಳಿಗ್ಗೆ ಕೊನೆಯುಸಿರೆಳೆದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ ಎಂದು ಪಶ್ಚಿಮ ಬಂಗಾಳದ ಸಿಪಿಎಂ ರಾಜ್ಯ ಕಾರ್ಯದರ್ಶಿ ಮೊಹಮ್ಮದ್‌ ಸಲೀಂ ತಿಳಿಸಿದ್ದಾರೆ.
2000-2011ರ ನಡುವೆ ಇವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದರು. 2011ರಲ್ಲಿ ಭಟ್ಟಾಚಾರ್ಯ ನೇತೃತ್ವದಲ್ಲಿ ಸಿಪಿಎಂ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿತ್ತು. ಆ ಮೂಲಕ 34 ವರ್ಷಗಳ ಸಿಪಿಎಂ ಸುಧೀರ್ಘ ಆಡಳಿತ ಪಶ್ಚಿಮ ಬಂಗಾಳದಲ್ಲಿ ಕೊನೆಗೊಂಡಿತ್ತು. ಅಲ್ಲಿಂದಾಚೆಗೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ ಆಡಳಿತದ ಚುಕ್ಕಾಣಿ ಹಿಡಿಯಿತು. ಇಲ್ಲಿನ ಪಾಮ್‌ ಅವೆನ್ಯೂದಲ್ಲಿರುವ ಸರ್ಕಾರದ 2ಬಿಎಚ್‌ಕೆ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು.

RELATED ARTICLES
- Advertisment -
Google search engine

Most Popular