ಕಾರ್ಕಳ: ವಿದ್ಯಾರ್ಥಿಗಳು ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಜೊತೆಯಾಗಬೇಕು. ಮಾದಕ ವಸ್ತುಗಳಿಂದ ದೂರವಿರಬೇಕು. ಮಾದಕ ವಸ್ತುಗಳ ಸೇವನೆಗೆ ಒಳಗಾಗದೆ ನಿಮ್ಮ ಅಮೂಲ್ಯ ಜೀವನವನ್ನು ಕಾಪಾಡಿಕೊಳ್ಳಿ.
ನಶಾ ಮುಕ್ತ ಭಾರತ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ ಎಂದು ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ನೇಮಿರಾಜ ಶೆಟ್ಟಿ ಹೇಳಿದರು. ಅವರು ಎಸ್ ವಿ ಟಿ ಸಭಾಂಗಣದಲ್ಲಿ ಆಯೋಜಿಸಿದ ಅಂತರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಕಳ್ಳ ಸಾಗಣೆ ವಿರೋಧಿ ದಿನಾಚರಣೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರೌಢಶಾಲೆ ಹಿರಿಯ ಸಹ ಶಿಕ್ಷಕರಾದ ಯೋಗೇಂದ್ರ ನಾಯಕ್ , ಉಪನ್ಯಾಸಕ ಹಾಗೂ ಅಧ್ಯಾಪಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.