Tuesday, January 14, 2025
Homeಮುಂಬೈರಾಮಮಂದಿರ ಕಟ್ಟುವುದರಿಂದ ಹಿಂದೂ ನಾಯಕನಾಗಲು ಸಾಧ್ಯವಿಲ್ಲ: ಮೋಹನ್‌ ಭಾಗವತ್‌

ರಾಮಮಂದಿರ ಕಟ್ಟುವುದರಿಂದ ಹಿಂದೂ ನಾಯಕನಾಗಲು ಸಾಧ್ಯವಿಲ್ಲ: ಮೋಹನ್‌ ಭಾಗವತ್‌

ಮುಂಬೈ: ರಾಮಮಂದಿರ ಕಟ್ಟುವ ಮೂಲಕ ಹಿಂದೂ ನಾಯಕನಾಗಲು ಸಾಧ್ಯವಿಲ್ಲ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥರಾದ ಮೋಹನ್‌ ಭಾಗವತ್‌ ಹೇಳಿದ್ದಾರೆ.
ಅವರು ಪುಣೆ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ʻವಿಶ್ವಗುರು ಭಾರತ್ʼ ಎಂಬ ಉಪನ್ಯಾಸ ಮಾಲಿಕೆಯಲ್ಲಿ ಮಾತನಾಡಿದರು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಳಿಕ, ಹೊಸ ಮಂದಿರ-ಮಸೀದಿ ವಿವಾದಗಳನ್ನು ಉದ್ದೇಶಪೂರ್ವಕವಾಗಿ ಹುಟ್ಟುಹಾಕಲಾಗುತ್ತಿದೆ. ಇಂತಹ ವಿವಾದಗಳನ್ನು ಸೃಷ್ಟಿಸುವ ಮೂಲಕ ಕೆಲವರು ತಾವು ಹಿಂದೂ ನಾಯಕ ಎಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ಇದರಿಂದ ಸಮಾಜಕ್ಕಾಗುವ ಹಾನಿಯನ್ನು ನಾವು ಅರಿಯಬೇಕಿದೆ. ರಾಮಮಂದಿರ ಕಟ್ಟುವ ಮೂಲಕ ಹಿಂದೂ ನಾಯಕನಾಗಲು ಸಾಧ್ಯವಿಲ್ಲ. ರಾಮಮಂದಿರ ಭಾರತೀಯರ ನಂಬಿಕೆ, ಹಿಂದೂಗಳ ನಂಬಿಕೆಯ ವಿಷಯವಾಗಿದೆ ಎಂದರು.
ದೇಶದಲ್ಲಿ ಯುಗಯುಗಾಂತರಗಳಿಂದ ವಿವಿಧ ಧರ್ಮ, ಜಾತಿ, ಮತ, ಮತ, ಸಿದ್ಧಾಂತಗಳ ಜನರು ಸೌಹಾರ್ದತೆಯಿಂದ ಬಾಳುತ್ತಿದ್ದಾರೆ. ಅದಕ್ಕಾಗಿಯೇ ನಾವು ವಿಭಜನೆಯ ಭಾಷೆಯನ್ನು ಬಿಟ್ಟು, ಅಲ್ಪಸಂಖ್ಯಾತ-ಬಹುಸಂಖ್ಯಾತ ತಾರತಮ್ಯ ಮರೆತು ಹೋರಾಡಬೇಕು. ನಮ್ಮ ಅಂತರ್ಗತ ಸಂಸ್ಕೃತಿಯ ಅಡಿಯಲ್ಲಿ ನಾವು ಒಂದಾಗಬೇಕು ಎಂದು ಅವರು ಹೇಳಿದರು.
ರಾಮ ಮಂದಿರ ಹಿಂದೂಗಳ ನಂಬಿಕೆಯ ವಿಷಯವಾಗಿದ್ದರಿಂದ, ಅದರ ನಿರ್ಮಾಣಕ್ಕಾಗಿ ಸಂಘವು ಅವಿರತ ಪ್ರಯತ್ನ ನಡೆಸಿತು. ಆದರೆ ಈಗ ರಾಜಕೀಯ ಲಾಭಕ್ಕಾಗಿ ಹೊಸದಾಗಿ ಸೃಷ್ಟಿಸಲಾಗುತ್ತಿರುವ ಮಂದಿರ-ಮಸೀದಿ ವಿವಾದಗಳು ಸಂಘಕ್ಕೆ ಸ್ವೀಕಾರ್ಹವಲ್ಲ ಎಂದು ನುಡಿದರು.

RELATED ARTICLES
- Advertisment -
Google search engine

Most Popular