ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು

0
10

ನವದೆಹಲಿ: ದೆಹಲಿಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಇಂದು ಮಧ್ಯಾಹ್ನ ದೆಹಲಿಯ ರೋಹಿಣಿ ಸೆಕ್ಟರ್ 16 ರಲ್ಲಿ ನಿರ್ಮಾಣ ಹಂತದಲ್ಲಿದ್ದ 4 ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದೆ. ಈ ಭೀಕರ ದುರಂತದಲ್ಲಿ 41 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಕಟ್ಟಡದ ಮಾಲೀಕ ಸೇರಿದಂತೆ 4 ಜನರು ಇನ್ನೂ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ರಾಮ್ ಎಂಬ 41 ವರ್ಷದ ವ್ಯಕ್ತಿ ಕಟ್ಟಡದ ಪಕ್ಕದಲ್ಲೇ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕಟ್ಟಡದ ಅವಶೇಷಗಳು ಅವರ ಮೇಲೆ ಬಿದ್ದಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

LEAVE A REPLY

Please enter your comment!
Please enter your name here